Job 28:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಲೋಹದ ಅದುರುಗಳು ಸಿಕ್ಕುವ ಸ್ಥಳಗಳಲ್ಲಿ ಅಗೆಯುತ್ತಾ ಹೋಗುವರು; ಜನರು ವಾಸವಾಗಿರುವುದಕ್ಕಿಂತ ಆಳವಾದ ಸ್ಥಳಕ್ಕೆ ಇಳಿದುಹೋಗುವರು; ಆಳವಾದ ಆ ಸ್ಥಳಗಳನ್ನು ಜನರು ಹಿಂದೆಂದೂ ನೋಡಿಯೇ ಇಲ್ಲ. ಅವರು ಹಗ್ಗಗಳನ್ನು ಕಟ್ಟಿಕೊಂಡು ಜನರಿಗೆ ಬಹುದೂರವಾದ ಆಳವಾದ ಗಣಿಗಳಲ್ಲಿ ನೇತಾಡುತ್ತಾ ದುಡಿಯುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಣಿಯನ್ನು ತೋಡಿ ತೋಡಿ ಭೂಮಿಯೊಳಗೆ ಬಹುದೂರ ಜನರು ವಾಸಸ್ಥಳಗಳಿಂದ ದೂರವಾಗುವರು, ಭೂಮಿಯ ಮೇಲೆ ನಡೆದಾಡುವವರಿಗೆ ಕಾಣದೆ, ನರಲೋಕಕ್ಕೆ ಅನ್ಯರಾಗಿ ಅತ್ತಿತ್ತ ಅಲೆದಾಡುವರು.
Kannada BSI Bible 2016
ನಿವಾಸದಿಂದ ಪ್ರವಾಹವು ಹೊರ ಚಿಮ್ಮುತ್ತದೆ. ನೀರುಗಳು ಕಾಲಿಗೆ ತಪ್ಪಿಸಿಕೊಂಡು ಒಣಗಿಹೋಗಿ ಮನುಷ್ಯರಿಗೆ ದೂರವಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಣಿಯನ್ನು ತೋಡಿ ತೋಡಿ ಜನನಿವಾಸಗಳಿಗೆ ದೂರವಾಗಿ [ಮೇಲೆ] ನಡೆದಾಡುವವರಿಗೆ ಮರೆತುಹೋಗಿ ನರಲೋಕಕ್ಕೆ ಅನ್ಯರಾಗಿ ಅತ್ತಿತ್ತ ನೇತಾಡುವರು.
Kannada Bible (KNCL) BSI 2016
ಗಣಿಯನ್ನು ತೋಡಿತೋಡಿ ಜನನಿವಾಸಿಗಳಿಗೆ ದೂರವಾಗಿ ಮೇಲ್ಗಡೆ ನಡೆದಾಡುವವರನ್ನು ಮರೆತುಹೋಗಿ ಅತ್ತಿತ್ತ ಅಲೆದಾಡುತ್ತಾರೆ ನರಲೋಕಕ್ಕೆ ಅನ್ಯರಾಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನ ನಿವಾಸದಿಂದ ದೂರವಾಗಿ ಗಣಿ ತೋಡಿ, ಮನುಷ್ಯರು ನಡೆದಾಡದ ಸ್ಥಳಗಳಲ್ಲಿ ಇತರರಿಂದ ಪ್ರತ್ಯೇಕವಾಗಿ ಕೆಲಸ ಮಾಡುತ್ತಾರೆ.