Job 29:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಾಯಕನಾಗಿದ್ದರೂ ಅವರೊಂದಿಗೇ ಇರುತ್ತಿದ್ದೆನು; ಪಾಳೆಯದಲ್ಲಿ ಸೈನ್ಯಗಳೊಂದಿಗಿರುವ ರಾಜನಂತೆ ನಾನು ದುಃಖಿತರನ್ನು ಆದರಿಸುತ್ತಿದ್ದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅವರಿಗೆ ತಕ್ಕ ಮಾರ್ಗವನ್ನು ಆರಿಸಿಕೊಟ್ಟು, ತನ್ನ ಸೈನ್ಯಗಳ ಮಧ್ಯದಲ್ಲಿ ಕುಳಿತಿರುವ ರಾಜನಂತೆಯೂ, ದುಃಖಿತರನ್ನು ಸಂತೈಸುವ ಮುಖಂಡನಾಗಿ ಆಸೀನನಾಗಿದ್ದೆನು.”
Kannada BSI Bible 2016
ಅವರ ಮಾರ್ಗವನ್ನು ಆದುಕೊಂಡು ಪ್ರಧಾನನಾಗಿ ಕೂತು ಗೋಳಾಡುವವರನ್ನು ಸಂತೈಸುವವನಾಗಿಯೇ ಅರಸನಂತೆ ಸೈನ್ಯದಲ್ಲಿ ಆಸೀನನಾಗಿದ್ದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅವರಿಗೆ ತಕ್ಕ ಮಾರ್ಗವನ್ನು ಆರಿಸಿಕೊಟ್ಟು ತನ್ನ ಸೈನ್ಯಗಳ ಮಧ್ಯದಲ್ಲಿ ಮಂಡಿಸಿರುವ ರಾಜನಂತೆಯೂ ದುಃಖಿತರನ್ನು ಸಂತೈಸುವವನಂತೆಯೂ ಮುಖಂಡನಾಗಿ ಕೂಡ್ರುತ್ತಿದ್ದೆನು.
Kannada Bible (KNCL) BSI 2016
ನಾನು ಅವರಿಗೆ ಮಾರ್ಗದರ್ಶಕನಾಗಿದ್ದೆ ಸೇನೆಗಳ ಮಧ್ಯೆ ರಾಜನಂತೆ ಮಂಡಿಸಿದ್ದೆ ದುಃಖಿತರನು ಸುಧಾರಕನಂತೆ ಸಂತೈಸುತ್ತಿದ್ದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅವರ ಪ್ರಧಾನನಾಗಿ ಕೂತು ಸೈನ್ಯಗಳ ನಡುವೆ ಅರಸನಂತೆ ಆಸೀನನಾಗಿದ್ದೆನು. ನಾನು ದುಃಖಿಸುವವರನ್ನು ಸಂತೈಸುವವನಾಗಿಯೂ ಇದ್ದೆನು.