Job 29:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದಿನಗಳಲ್ಲಿ ನನ್ನ ಜೀವಿತವು ತುಂಬ ಚೆನ್ನಾಗಿತ್ತು. ನನ್ನ ಮಾರ್ಗಗಳು ಕೆನೆಯಿಂದ ತುಂಬಿರುವಂತೆಯೂ ಬಂಡೆಗಳು ನನಗಾಗಿ ಆಲೀವ್ ಎಣ್ಣೆಯ ನದಿಗಳನ್ನೇ ಹರಿಸುತ್ತಿರುವಂತೆಯೂ ನನ್ನ ಜೀವಿತವಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಲು ತುಪ್ಪದಲ್ಲಿ ನನ್ನ ಪಾದಗಳನ್ನು ತೊಳೆಯುತ್ತಿದ್ದೆ, ಬಂಡೆಯು ನನಗೋಸ್ಕರ ಎಣ್ಣೆಯನ್ನು ಪ್ರವಾಹವಾಗಿ ಸುರಿಸುತ್ತಿತ್ತು.
Kannada BSI Bible 2016
ನನ್ನ ಹೆಜ್ಜೆಗಳನ್ನು ಬೆಣ್ಣೆ ಯಿಂದ ತೊಳೆಯುತ್ತಾ ಇದ್ದೆನು; ಬಂಡೆಯು ನನ್ನ ಬಳಿಯಲ್ಲಿ ಎಣ್ಣೆಯ ಪ್ರವಾಹಗಳನ್ನು ಹೊಯ್ಯುತ್ತಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಹೆಜ್ಜೆಗಳು ಮೊಸರಿನಲ್ಲಿ ಮುಣುಗುತ್ತಿದ್ದವು, ಬಂಡೆಯು ನನಗೋಸ್ಕರ ಎಣ್ಣೆಯನ್ನು ಪ್ರವಾಹವಾಗಿ ಸುರಿಸುತ್ತಿತ್ತು.
Kannada Bible (KNCL) BSI 2016
ಹಾಲುತುಪ್ಪದಲ್ಲಿ ಪಾದ ತೊಳೆಯುತ್ತಿದ್ದೆ ಎಣ್ಣೆಯನು ನದಿಯಂತೆ ಹರಿಸುತ್ತಿತ್ತಾ ದಿಣ್ಣೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಹೆಜ್ಜೆಗಳನ್ನು ಮೊಸರಿನಿಂದ ತೊಳೆಯುತ್ತಾ ಇದ್ದೆನು; ಬಂಡೆಯಿಂದ ನನಗೆ ಓಲಿವ್ ಎಣ್ಣೆ ಪ್ರವಾಹವಾಗಿ ಸುರಿಸುತ್ತಿತ್ತು.