Job 3:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಮಗುವಾಗಿ ಹುಟ್ಟುವಾಗಲೇ ಸತ್ತು ನೆಲದಲ್ಲಿ ಸಮಾಧಿಯಾಗಲಿಲ್ಲವೇಕೆ? ಹಗಲಿನ ಬೆಳಕನ್ನು ಎಂದೂ ಕಂಡಿಲ್ಲದ ಮಗುವಿನಂತೆ ನಾನಿರಬೇಕಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ವೇಳೆ ನಾನು ಗರ್ಭಸ್ರಾವವಾಗಿ ಬಿದ್ದು, ಹೂಳಿಟ್ಟ ಪಿಂಡದಂತೆ, ಬೆಳಕನ್ನೇ ಕಾಣದೆ ಸತ್ತುಹೋದ ಕೂಸುಗಳಂತೆ ಜನ್ಮವಿಲ್ಲದವನಾಗಿ ಇರುತ್ತಿದ್ದೆನು.
Kannada BSI Bible 2016
ಇಲ್ಲವೆ ಮರೆಯಾದ ಗರ್ಭ ಪತನದ ಹಾಗೆಯೂ ಬೆಳಕನ್ನು ನೋಡದ ಕೂಸುಗಳ ಹಾಗೆಯೂ ಇಲ್ಲದೆ ಇರುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ವೇಳೆ ನಾನು ಗರ್ಭಸ್ರಾವವಾಗಿ ಬಿದ್ದ ಹೂಳಿಟ್ಟ ಪಿಂಡದಂತೆಯಾಗಲಿ ಬೆಳಕನ್ನೇ ಕಾಣದೆ ಸತ್ತ ಕೂಸುಗಳಂತೆಯಾಗಲಿ ಆಗಿದ್ದರೆ ಜನ್ಮವಿಲ್ಲದೆ ಇರುತ್ತಿದ್ದೆನು.
Kannada Bible (KNCL) BSI 2016
ಗರ್ಭಸ್ರಾವವಾಗಿ ಬಿದ್ದು ಹೂಳಿಟ್ಟಪಿಂಡದಂತೆ ಬೆಳಕನ್ನೇ ಕಾಣದೆ ಸತ್ತುಹೋದ ಕೂಸುಗಳಂತೆ ಪ್ರಾಯಶಃ ಜನ್ಮವೇ ಇಲ್ಲದವನಾಗಿ ನಾನಿರುತ್ತಿದ್ದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗರ್ಭಸ್ರಾವವಾಗಿ ಹೂಣಿಟ್ಟ ಪಿಂಡದಂತೆಯೂ ಬೆಳಕನ್ನು ನೋಡದ ಕೂಸುಗಳಂತೆಯೂ ನಾನೇಕೆ ಆಗಲಿಲ್ಲ?