Job 3:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ದಿನವನ್ನು ಕತ್ತಲೆಯೂ ಮರಣದ ನೆರಳೂ ವಶಪಡಿಸಿಕೊಳ್ಳಲಿ. ಆ ದಿನವನ್ನು ಮೋಡವು ಕವಿದುಕೊಳ್ಳಲಿ. ನಾನು ಹುಟ್ಟಿದ ದಿನದ ಹಗಲನ್ನು ಗ್ರಹಣಗಳು ಭಯಪಡಿಸಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕತ್ತಲೆಯೂ, ಘೋರಾಂಧಕಾರವೂ ಅದನ್ನು ವಶಮಾಡಿಕೊಳ್ಳಲಿ. ಮೋಡವು ಅದನ್ನು ಕವಿಯಲಿ, ಹಗಲನ್ನು ಮುಚ್ಚಿಕೊಳ್ಳುವ ಮೊಬ್ಬು ಅದನ್ನು ಹೆದರಿಸಲಿ.
Kannada BSI Bible 2016
ಕತ್ತಲೂ ಮರಣದ ನೆರಳೂ ಅದನ್ನು ಅಶುದ್ಧಮಾಡಲಿ; ಮೋಡವು ಅದರ ಮೇಲೆ ವಾಸಮಾಡಲಿ; ಹಗಲಿನ ಮೊಬ್ಬುಗಳು ಅದನ್ನು ಹೆದ ರಿಸಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕತ್ತಲೆಯೂ ಘೋರಾಂಧಕಾರವೂ ಅದನ್ನು ವಶಮಾಡಿಕೊಳ್ಳಲಿ; ಮೋಡವು ಅದನ್ನು ಕವಿಯಲಿ, ಹಗಲನ್ನು ಮುಚ್ಚಿಕೊಳ್ಳುವ ಮೊಬ್ಬು ಅದನ್ನು ಹೆದರಿಸಲಿ;
Kannada Bible (KNCL) BSI 2016
ಕಾರ್ಮೋಡಗಳು ಅದನ್ನು ಕವಿಯಲಿ ಇರುಳೂ ಮರಣದ ನೆರಳೂ ಅದನ್ನು ಆಕ್ರಮಿಸಲಿ ಹಗಲನ್ನೇ ಮಬ್ಬಾಗಿಸುವ ಮುಸುಕು ಅದನ್ನು ಹೆದರಿಸಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕತ್ತಲೂ ಕಾರ್ಗತ್ತಲೂ ಆ ದಿನವನ್ನು ವಶಮಾಡಿಕೊಳ್ಳಲಿ; ಮೋಡವು ಅದರ ಮೇಲೆ ಕವಿಯಲಿ; ಕತ್ತಲೆ ಅದನ್ನು ಭಯಪಡಿಸಲಿ.