Job 30:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಗಲಾದರೋ, ನನಗಿಂತ ಚಿಕ್ಕವರೂ ನನ್ನನ್ನು ಗೇಲಿ ಮಾಡುತ್ತಾರೆ. ಅವರ ತಂದೆಗಳನ್ನು ನನ್ನ ಕುರಿಕಾಯುವ ನಾಯಿಗಳಿಗೂ ಯೋಗ್ಯರಲ್ಲವೆಂದು ತಳ್ಳಿಬಿಟ್ಟಿದ್ದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗಲಾದರೋ ನನಗಿಂತ ಚಿಕ್ಕವಯಸ್ಸಿನವರು ನನ್ನನ್ನು ಪರಿಹಾಸ್ಯಮಾಡುತ್ತಾರೆ; ಇವರ ಹೆತ್ತವರನ್ನು ನನ್ನ ಕುರಿ ಮಂದೆಯ ನಾಯಿಗಳ ಸಂಗಡ ಸೇರಿಸುವುದಕ್ಕೂ ಉದಾಸಿನ ಮಾಡಿದೆನು.
Kannada BSI Bible 2016
ಆದರೆ ಈ ದಿವಸಗಳಲ್ಲಿ ನನಗಿಂತ ಚಿಕ್ಕವರು ನನ್ನನ್ನು ನೋಡಿ ಪರಿಹಾಸ್ಯಮಾಡುತ್ತಾರೆ; ಅವರ ತಂದೆಗಳನ್ನು ನನ್ನ ಕುರಿಮಂದೆಯ ನಾಯಿಗಳ ಸಂಗಡ ಸೇರಿಸುವದಕ್ಕೂ ಅಯೋಗ್ಯರೆಂದೆನು
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗಲಾದರೋ ನನಗಿಂತ ಚಿಕ್ಕ ವಯಸ್ಸಿನವರು ನನ್ನನ್ನು ಪರಿಹಾಸ್ಯ ಮಾಡುತ್ತಾರೆ; ಇವರ ತಂದೆಗಳನ್ನು ನನ್ನ ಮಂದೆನಾಯಿಗಳೊಡನೆಯೂ ಇರತಕ್ಕವರಲ್ಲವೆಂದು ತಳ್ಳಿಬಿಟ್ಟಿದ್ದೆನಲ್ಲಾ.
Kannada Bible (KNCL) BSI 2016
“ಈಗಲಾದರೊ ನನಗಿಂತ ಚಿಕ್ಕವರು ನನ್ನನ್ನು ಪರಿಹಾಸ್ಯಮಾಡುತ್ತಾರೆ. ಇವರ ಹೆತ್ತವರು ನನ್ನ ಮುಂದೆ. ನಾಯಿಗಳೊಡನೆ ಇರಲೂ ಅಯೋಗ್ಯರು ಎಂದೆಣಿಸಿದ್ದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ಈ ದಿವಸಗಳಲ್ಲಿ ನನಗಿಂತ ಚಿಕ್ಕವರು, ನನ್ನನ್ನು ನೋಡಿ ಪರಿಹಾಸ್ಯ ಮಾಡುತ್ತಾರೆ. ಇವರ ಪಿತೃಗಳನ್ನು ನನ್ನ ಕುರಿಮಂದೆಯ ನಾಯಿಗಳೊಡನೆ ಇರಲೂ ಅಯೋಗ್ಯರು ಎಂದೆಣಿಸಿದ್ದೆನು.