Job 30:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ನನ್ನ ಬಿಲ್ಲಿನ ತಂತಿಯನ್ನು ಕಿತ್ತು ನನ್ನನ್ನು ಬಲಹೀನಗೊಳಿಸಿದ್ದಾನೆ. ಆ ಯೌವನಸ್ಥರು ಕಡಿವಾಣವಿಲ್ಲದವರಾಗಿ ಕೋಪದಿಂದ ನನಗೆ ವಿರೋಧವಾಗಿ ಎದ್ದಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ತಾನು ಹಾಕಿದ್ದ ಕಟ್ಟನ್ನು ಸಡಲಿಸಿ ನನ್ನನ್ನು ಬಾಧಿಸುವುದಕ್ಕೆ ಅವರನ್ನು ಬಿಟ್ಟಿದ್ದಾನೆ. ಅವರು ನನ್ನ ಎದುರಿನಲ್ಲಿಯೇ ಕಡಿವಾಣವನ್ನು ಕಿತ್ತು ಹಾಕಿದ್ದಾರೆ.
Kannada BSI Bible 2016
ಆತನು ತನ್ನ ಹಗ್ಗವನ್ನು ಸಡಲಿಸಿ ನನ್ನನ್ನು ಶ್ರಮೆ ಪಡಿಸುತ್ತಾನೆ; ನನ್ನ ಮುಖದ ಮುಂದೆ ಕಡಿವಾಣಕಿತ್ತು ಬಿಡುತ್ತಾರೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ತಾನು ಹಾಕಿದ್ದ ಕಟ್ಟನ್ನು ಸಡಲಿಸಿ ನನ್ನನ್ನು ಬಾಧಿಸುವದಕ್ಕೆ ಅವರನ್ನು ಬಿಟ್ಟಿದ್ದಾನೆ. ಅವರು ನನ್ನ ಎದುರಿನಲ್ಲಿಯೇ ಕಡಿವಾಣವನ್ನು ಕಿತ್ತು ಹಾಕಿದ್ದಾರೆ.
Kannada Bible (KNCL) BSI 2016
ದೇವರು ನನ್ನ ಬಿಲ್ಲನು ಸಡಿಲಗೊಳಿಸಿ ಪೆಟ್ಟಿಗೀಡಾಗಿಸಿದ್ದಾರೆ ಅವರೋ ಕಡಿವಾಣವಿಲ್ಲದ ಕುದುರೆಗಳಂತೆ ನನ್ನ ಮುಂದಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ದೇವರು ನನ್ನ ಬಿಲ್ಲಿನ ಹಗ್ಗವನ್ನು ಸಡಲಿಸಿ, ಅವರಿಂದ ನನ್ನನ್ನು ಬಾಧಿಸಿದ್ದಾರೆ. ಆದ್ದರಿಂದ ಈಗ ಅವರು ಯಾವುದೇ ನಿರ್ಬಂಧವಿಲ್ಲದಂತೆ ನನ್ನ ಮೇಲೆ ಹೀಗೆಲ್ಲಾ ವರ್ತಿಸುತ್ತಿದ್ದಾರೆ.