Job 30:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಭಯದಿಂದ ನಡುಗುತ್ತಿರುವೆ. ಗಾಳಿಯು ವಸ್ತುಗಳನ್ನು ಕೊಚ್ಚಿಕೊಂಡು ಹೋಗುವಂತೆ ಆ ಯೌವನಸ್ಥರು ನನ್ನ ಮಾನವನ್ನು ಅಟ್ಟಿಬಿಡುವರು. ನನ್ನ ಸುರಕ್ಷತೆಯು ಮೋಡದಂತೆ ಕಾಣದೆಹೋಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಪಾಯಗಳು ನನ್ನ ಮೇಲೆ ತಿರುಗಿಬಿದ್ದು; ನನ್ನ ಮಾನವನ್ನು ಗಾಳಿಯಂತೆ ಹೊಡೆದುಕೊಂಡು ಹೋಗುತ್ತಿವೆ; ನನ್ನ ಕ್ಷೇಮವು ಮೇಘದ ಹಾಗೆ ಹರಿದು ಹೋಯಿತು.
Kannada BSI Bible 2016
ದಿಗಿಲುಗಳು ನನ್ನ ಮೇಲೆ ಬಂದವೆ; ಅವು ಗಾಳಿಯ ಹಾಗೆ ನನ್ನ ಪ್ರಾಣ ವನ್ನು ಹಿಂದಟ್ಟುತ್ತವೆ; ಮೇಘದ ಹಾಗೆ ನನ್ನ ಕ್ಷೇಮವು ದಾಟಿ ಹೋಗುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಪಾಯಗಳು ನನ್ನ ಮೇಲೆ ತಿರುಗಿಬಿದ್ದು ನನ್ನ ಮಾನವನ್ನು ಗಾಳಿಯಂತೆ ಹೊಡೆದುಕೊಂಡು ಹೋಗುತ್ತಿವೆ; ನನ್ನ ಕ್ಷೇಮವು ಮೇಘದ ಹಾಗೆ ಹರಿದು ಹೋಯಿತು.
Kannada Bible (KNCL) BSI 2016
ಅಡ್ಡಿ ಆತಂಕಗಳು ನನ್ನನು ಸುತ್ತುವರೆದಿವೆ ನನ್ನ ಮಾನಮರ್ಯಾದೆ ತೂರಿಹೋಗುತ್ತಿದೆ ಗಾಳಿಯಂತೆ ನನ್ನ ಯೋಗಕ್ಷೇಮ ತೇಲಿಹೋಗುತ್ತಿದೆ ಮೋಡದಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವಿಪತ್ತುಗಳು ನನ್ನ ಮೇಲೆ ತಿರುಗಿಬಿದ್ದು, ನನ್ನ ಮಾನಮರ್ಯಾದೆ ಗಾಳಿಯಂತೆ ಹೊಡೆದುಕೊಂಡು ಹೋಗುತ್ತಿದೆ; ನನ್ನ ಕ್ಷೇಮವು ಮೇಘದ ಹಾಗೆ ಹರಿದು ಹೋಗುತ್ತಿದೆ.