Job 31:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ನನ್ನನ್ನು ನನ್ನ ತಾಯಿಯ ಗರ್ಭದಲ್ಲಿ ನಿರ್ಮಿಸಿದನು. ದೇವರು ನನ್ನ ಸೇವಕಸೇವಕಿಯರನ್ನೂ ನಿರ್ಮಿಸಿದನು. ದೇವರು ನಮ್ಮೆಲ್ಲರನ್ನು ನಮ್ಮ ತಾಯಂದಿರ ಗರ್ಭಗಳಲ್ಲಿ ರೂಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನನ್ನು ಗರ್ಭದಲ್ಲಿ ನಿರ್ಮಿಸಿದಾತನೇ ಅವನನ್ನೂ ನಿರ್ಮಿಸಲಿಲ್ಲವೋ? ಆತನೊಬ್ಬನೇ ನಮ್ಮಿಬ್ಬರನ್ನೂ ಗರ್ಭದಲ್ಲಿ ರೂಪಿಸಿದನಲ್ಲವೇ.
Kannada BSI Bible 2016
ಗರ್ಭದಲ್ಲಿ ನನ್ನನ್ನು ಉಂಟುಮಾಡಿ ದಾತನು ಅವನನ್ನೂ ಉಂಟು ಮಾಡಿದ್ದಾನಲ್ಲಾ? ನಮ್ಮನ್ನು ಗರ್ಭದಲ್ಲಿ ರೂಪಿಸಿದಾತನು ಒಬ್ಬನೇ ಅಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನನ್ನು ಗರ್ಭದಲ್ಲಿ ನಿರ್ಮಿಸಿದಾತನೇ ಅವನನ್ನೂ ನಿರ್ಮಿಸಲಿಲ್ಲವೋ? ಆತನೊಬ್ಬನೇ ನಮ್ಮಿಬ್ಬರನ್ನೂ ಹೊಟ್ಟೆಯಲ್ಲಿ ರೂಪಿಸಿದನಲ್ಲವೇ.
Kannada Bible (KNCL) BSI 2016
ತಾಯಗರ್ಭದಲ್ಲಿ ನನ್ನ ನಿರ್ಮಿಸಿದಾತನೆ ಅವರನೂ ನಿರ್ಮಿಸಲಿಲ್ಲವೆ? ತಾಯಗರ್ಭದಲ್ಲಿ ನಮ್ಮನು ರೂಪಿಸಿದಾತ ಅದೇ ದೇವರಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗರ್ಭದಲ್ಲಿ ನನ್ನನ್ನು ಉಂಟುಮಾಡಿದ ದೇವರೇ ಅವರನ್ನೂ ಉಂಟು ಮಾಡಿದ್ದಾರಲ್ಲವೇ? ಅವರನ್ನೂ, ನನ್ನನ್ನೂ ತಾಯಂದಿರ ಗರ್ಭದಲ್ಲಿ ರೂಪಿಸಿದ ದೇವರು ಒಬ್ಬರೇ ಅಲ್ಲವೇ?