Job 31:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನನ್ನ ಜೀವಮಾನವೆಲ್ಲಾ, ಅನಾಥರಿಗೆ ತಂದೆಯಂತಿದ್ದೆನು; ವಿಧವೆಯರನ್ನು ಪರಿಪಾಲಿಸಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗಲ್ಲ, ನಾನು ಬಾಲ್ಯದಿಂದಲೂ ತಂದೆಯ ರೀತಿಯಲ್ಲಿ ಅನಾಥನನ್ನು ಸಾಕುತ್ತಾ, ನಾನು ಹುಟ್ಟಿದಂದಿನಿಂದಲು ಅನಾಥಳಿಗೆ ದಾರಿತೋರಿಸುತ್ತಾ ಇದ್ದೇನಷ್ಟೆ.
Kannada BSI Bible 2016
(ಯಾಕಂದರೆ ನನ್ನ ಯೌವನದಿಂದ ನನ್ನೊಂದಿಗೆ ನಾನು ಅವನನ್ನು ತಂದೆ ಯಂತೆ ಬೆಳೆಸಿದೆನಲ್ಲಾ. ನನ್ನ ತಾಯಿಯ ಗರ್ಭದಿಂದ ಅವಳನ್ನು ನಡಿಸಿದೆನಲ್ಲಾ).
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗಲ್ಲ, ನಾನು ಬಾಲ್ಯದಿಂದಲೂ ತಂದೆಯೋಪಾದಿಯಲ್ಲಿ ಅನಾಥನನ್ನು ಸಾಕುತ್ತಾ ನಾನು ಹುಟ್ಟಿದಂದಿನಿಂದಲೂ ಅನಾಥಳಿಗೆ ದಾರಿ ತೋರಿಸುತ್ತಾ ಇದ್ದೆನಷ್ಟೆ.
Kannada Bible (KNCL) BSI 2016
ಇಲ್ಲ, ಬಾಲ್ಯದಲ್ಲಿ ಅನಾಥನನು ತಂದೆಯೋಪಾದಿಯಲಿ ಸಾಕಿದೆ ಹುಟ್ಟಿದಂದಿನಿಂದ ಅನಾಥನಿಗೆ ದಾರಿತೋರಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಲ್ಲಾ, ನನ್ನ ಯೌವನಕಾಲದಿಂದ ನಾನು ಅನಾಥರನ್ನು ತಂದೆಯಂತೆ ಬೆಳೆಸಿದೆನು. ಹುಟ್ಟಿದಂದಿನಿಂದ ವಿಧವೆಯರಿಗೆ ಮಾರ್ಗದರ್ಶಿಯಾಗಿದ್ದೆನು.