Job 31:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಅಪರಿಚಿತರನ್ನು ನನ್ನ ಮನೆಗೆ ಯಾವಾಗಲೂ ಆಹ್ವಾನಿಸುತ್ತಿದ್ದೆನು. ಆದ್ದರಿಂದ ರಾತ್ರಿಯಲ್ಲಿ ಅವರು ಬೀದಿಗಳಲ್ಲಿ ಮಲಗಿಕೊಳ್ಳಬೇಕಾಗಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪರಸ್ಥಳದವನು ಬಯಲಿನಲ್ಲಿ ಇಳಿದುಕೊಳ್ಳಲಿಲ್ಲವಲ್ಲಾ, ದಾರಿಗೆ ನನ್ನ ಮನೆಯ ಬಾಗಿಲುಗಳನ್ನು ತೆರೆದಿದ್ದೆನಷ್ಟೆ.
Kannada BSI Bible 2016
ಪರದೇಶಸ್ಥನು ಬೀದಿ ಯಲ್ಲಿ ಇಳುಕೊಳ್ಳಲಿಲ್ಲ; ಆದರೆ ನನ್ನ ಬಾಗಲನ್ನು ಮಾರ್ಗಸ್ಥರಿಗೆ ತೆರೆಯುತ್ತಾ ಇದ್ದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪರಸ್ಥಳದವನು ಬೈಲಿನಲ್ಲಿ ಇಳಿದುಕೊಳ್ಳಲಿಲ್ಲವಲ್ಲಾ, ದಾರಿಗೆ ನನ್ನ ಮನೇಬಾಗಲುಗಳನ್ನು ತೆರೆದಿದ್ದೆನಷ್ಟೆ.
Kannada Bible (KNCL) BSI 2016
ಪರದೇಶೀಯರು ಹೊರಬೀದಿಯಲ್ಲಿ ತಂಗಬೇಕಾಗಿರಲಿಲ್ಲ ಪ್ರಯಾಣಿಕರಿಗೆ ನನ್ನ ಬಾಗಿಲು ಸದಾ ತೆರೆದಿತ್ತಲ್ಲಾ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯಾವ ಪರದೇಶಸ್ಥರೂ ಬೀದಿಯಲ್ಲಿ ತಂಗಬೇಕಾಗಿರಲಿಲ್ಲ; ಪ್ರಯಾಣಿಕರಿಗೆ ನನ್ನ ಬಾಗಿಲು ಸದಾ ತೆರೆದಿಟ್ಟಿದ್ದೆನು.