Job 31:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರ ಮಾತಿಗೆ ನಾನೆಂದೂ ಭಯಗೊಂಡಿರಲಿಲ್ಲ. ಯಾವ ಕುಟುಂಬದ ಅಸಮ್ಮತಿಗೂ ನಾನೆಂದೂ ಹೆದರಿಕೊಂಡಿರಲಿಲ್ಲ. ಅಂಥ ಯಾವ ಭಯವೂ ನನ್ನನ್ನು ಮೌನಗೊಳಿಸಿ ಮನೆಯೊಳಗಿರಿಸಲಿಲ್ಲ. ಯಾಕೆಂದರೆ ನನ್ನ ಮೇಲೆ ಜನರಿಗಿರುವ ದ್ವೇಷಕ್ಕೆ ನಾನು ಹೆದರಿಕೊಂಡಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಬಾಗಿಲು ದಾಟದೆ ಮೌನವಾಗಿದ್ದು, ಸಾಮಾನ್ಯ ಜನರ ಹಾಗೆ ನನ್ನ ದ್ರೋಹಗಳನ್ನು ಮರೆಮಾಡಿ, ಎದೆಯಲ್ಲಿ ನನ್ನ ಪಾಪವನ್ನು ಬಚ್ಚಿಟ್ಟುಕೊಂಡಿದ್ದರೆ,
Kannada BSI Bible 2016
ದೊಡ್ಡ ಸಮೂಹಕ್ಕೆ ಹೆದರಿದೆನೋ? ಕುಲಗಳ ಉದಾಸೀನದಿಂದ ಕಳವಳಗೊಂಡೆನೋ? ಹೊರಗೆ ಬಾರದೆ ಮೌನವಾಗಿದ್ದೆನೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಬಾಗಲು ದಾಟದೆ ಮೌನವಾಗಿದ್ದು ಸಾಮಾನ್ಯ ಜನರ ಹಾಗೆ ನನ್ನ ದ್ರೋಹಗಳನ್ನು ಮರೆಮಾಜಿ ಎದೆಯಲ್ಲಿ ನನ್ನ ಪಾಪವನ್ನು ಬಚ್ಚಿಟ್ಟುಕೊಂಡಿದ್ದರೆ -
Kannada Bible (KNCL) BSI 2016
ಬಾಗಿಲನ್ನೂ ದಾಟದೆ ಒಳಗೇ ನಾನು ಮೌನವಿದ್ದಿದ್ದರೆ ಜನಸಾಮಾನ್ಯರಂತೆ ಪಾಪವನು ಮನದಲೆ ಬಚ್ಚಿಟ್ಟಿದ್ದರೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ದೊಡ್ಡ ಸಮೂಹಕ್ಕೆ ಹೆದರಿದೆನೋ? ಕುಲಗಳ ಅವಹೇಳನಕ್ಕೆ ಕಳವಳಗೊಂಡರೂ, ಬಾಗಿಲಿನಿಂದ ಹೊರಗೆ ಹೋಗದೆ ಮೌನವಾಗಿದ್ದೆನೋ?