Job 31:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಅಯ್ಯೋ, ನನಗೆ ಕಿವಿಗೊಡುವುದಕ್ಕೆ ಯಾರಾದರೊಬ್ಬರು ಇರಬೇಕಿತ್ತು! ನಾನು ಸತ್ಯವನ್ನೇ ಹೇಳಿದೆನೆಂಬುದಕ್ಕೆ ಇದೋ, ಇಲ್ಲಿದೆ ನನ್ನ ಸಹಿ! ಸರ್ವಶಕ್ತನಾದ ದೇವರು ನನಗೆ ಉತ್ತರಕೊಡಲಿ. ನನ್ನ ಮೇಲೆ ಅಪವಾದ ಹೊರಿಸುವವನು, ಆಪಾದನೆಯ ಪತ್ರವನ್ನು ಕೊಡಲಿ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಯ್ಯೋ, ನನ್ನ ಕಡೆಗೆ ಕಿವಿಗೊಡತಕ್ಕವನು ಇದ್ದರೆ ಎಷ್ಟೋ ಲೇಸು! ಇದೇ ನನ್ನ ಕೈಗುರುತು ನೋಡಿರಿ, ಸರ್ವಶಕ್ತನಾದ ದೇವರು ನನಗೆ ಉತ್ತರಕೊಡಲಿ! ನನ್ನ ವಿರೋಧಿಯು ಬರೆದುಕೊಂಡ ಅಪಾದನೆಯ ಪತ್ರವು ನನಗೆ ಸಿಕ್ಕಿದರೆ ಎಷ್ಟೋ ಸಂತೋಷ!
Kannada BSI Bible 2016
ಕೇಳುವವನು ನನಗೆ ಸಿಕ್ಕಿದರೆ ವಾಸಿ; ಇಗೋ, ಸರ್ವಶಕ್ತನು ನನಗೆ ಉತ್ತರಕೊಡಲಿ; ನನ್ನ ವಿರೋ ಧಿಯು ಪುಸ್ತಕವನ್ನು ಬರೆಯಲಿ, ಇದೇ ನನ್ನ ಆಶೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯ್ಯೋ, ನನ್ನ ಕಡೆಗೆ ಕಿವಿಗೊಡತಕ್ಕವನು ಇದ್ದರೆ ಎಷ್ಟೋ ಲೇಸು! ಇದೇ ನನ್ನ ಕೈಗುರುತು, ನೋಡಿರಿ, ಸರ್ವಶಕ್ತನು ನನಗೆ ಉತ್ತರಕೊಡಲಿ! ನನ್ನ ವಿರೋಧಿಯು ಬರೆದುಕೊಂಡ ಆಪಾದನಪತ್ರವು ನನಗೆ ಸಿಕ್ಕಿದರೆ ಎಷ್ಟೋ ಸಂತೋಷ!
Kannada Bible (KNCL) BSI 2016
ನನ್ನ ಕರೆಗೆ ಕಿವಿಗೊಡುವನೊಬ್ಬನು ಈಗಿದ್ದರೆ ಲೇಸಾಗಿರುತ್ತಿತ್ತು (ಇಗೋ ನೋಡಿ, ನನ್ನ ಕೈರುಜು; ನನಗುತ್ತರಕೊಡಲಿ ಸರ್ವಶಕ್ತನು;) ಬರೆದುಕೊಡಲಿ ವಿರೋಧಿ ನನ್ನ ಆಪಾದನಾ ಪತ್ರವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನ್ನ ಕರೆಗೆ ಕಿವಿಗೊಡತಕ್ಕವರು ಒಬ್ಬರು ಈಗ ಇದ್ದರೆ ಎಷ್ಟೋ ಲೇಸು! ಸರ್ವಶಕ್ತರು ನನಗೆ ಉತ್ತರಕೊಡಲಿ; ನನ್ನ ವಿರೋಧಿಯು ನನ್ನ ಆಪಾದನಾ ಪತ್ರವನ್ನು ಬರೆದು ಕೊಡಲಿ.