Job 31:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನನ್ನ ಹೊಲವನ್ನು ಬೇರೆಯವರಿಂದ ಕಿತ್ತುಕೊಳ್ಳಲಿಲ್ಲ; ಈ ವಿಷಯದಲ್ಲಿ ಯಾರೂ ನನ್ನ ಮೇಲೆ ಅಪವಾದ ಹೊರಿಸಲಾರರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಭೂಮಿಯು ನನ್ನ ಮೇಲೆ ಕೂಗಿಕೊಂಡರೆ ಅದರ ನೇಗಿಲ ಗೆರೆಗಳೆಲ್ಲಾ ಅತ್ತರೆ,
Kannada BSI Bible 2016
ನನ್ನ ಭೂಮಿಯು ನನಗೆ ವಿರೋಧವಾಗಿ ಕೂಗಿದರೆ, ಅದರ ಸಾಲುಗಳು ಕೂಡ ದೂರಿದರೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಭೂವಿುಯು ನನ್ನ ಮೇಲೆ ಕೂಗಿಕೊಂಡರೆ ಅದರ ನೇಗಿಲಗೆರೆಗಳೆಲ್ಲಾ ಅತ್ತರೆ
Kannada Bible (KNCL) BSI 2016
ನನ್ನ ಭೂಮಿ ನನಗೆ ವಿರುದ್ಧ ಪ್ರತಿಭಟಿಸಿದ್ದರೆ ನೇಗಿಲ ಗೆರೆಗಳೆಲ್ಲ ನನ್ನನು ದೂರಿ ರೋದಿಸಿದ್ದರೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನ್ನ ಹೊಲ ನನಗೆ ವಿರೋಧವಾಗಿ ಪ್ರತಿಭಟಿಸಿದ್ದರೆ, ಅದರ ನೇಗಿಲ ಗೆರೆಗಳೆಲ್ಲಾ ದೂರಿ ಅಳುತ್ತಿದ್ದರೆ,