Job 32:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿಮ್ಮ ಮಾತುಗಳನ್ನು ಬಹಳ ಎಚ್ಚರಿಕೆಯಿಂದ ಗಮನವಿಟ್ಟು ಕೇಳಿದೆನು. ಆದರೆ ಯೋಬನು ತಪ್ಪಿತಸ್ಥನೆಂಬುದನ್ನು ನೀವು ನಿರೂಪಿಸಲಿಲ್ಲ. ನಿಮ್ಮಲ್ಲಿ ಒಬ್ಬರೂ ಯೋಬನ ವಾದಗಳಿಗೆ ಉತ್ತರಕೊಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಮೇಲೆ ಲಕ್ಷ್ಯವಿಟ್ಟಿದ್ದೆನು; ಆಹಾ, ನಿಮ್ಮಲ್ಲಿ ಯೋಬನನ್ನು ಖಂಡಿಸಬಲ್ಲವನು, ಅವನ ಮಾತುಗಳಿಗೆ ಉತ್ತರಕೊಡತಕ್ಕವನು, ಯಾರೂ ಸಿಕ್ಕಲಿಲ್ಲ.
Kannada BSI Bible 2016
ಆದರೆ ಇಗೋ, ಯೋಬನನ್ನು ಮನಗಾಣಿಸುವವನೂ ಅವನ ಮಾತು ಗಳಿಗೆ ಉತ್ತರ ಕೊಡುವವನೂ ನಿಮ್ಮಲ್ಲಿ ಒಬ್ಬನೂ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಮೇಲೆ ಲಕ್ಷ್ಯವಿಟ್ಟಿದ್ದೆನು; ಆಹಾ, ನಿಮ್ಮಲ್ಲಿ ಯೋಬನನ್ನು ಖಂಡಿಸಬಲ್ಲವನು, ಅವನ ಮಾತುಗಳಿಗೆ ಉತ್ತರಕೊಡತಕ್ಕವನು, ಯಾರೂ ಸಿಕ್ಕಲಿಲ್ಲ.
Kannada Bible (KNCL) BSI 2016
ಯೋಬನನು ಖಂಡಿಸಬಲ್ಲವನು, ಅವನಿಗೆ ತಕ್ಕ ಉತ್ತರಕೊಡಬಲ್ಲವನು ನಿಮ್ಮಲ್ಲಿ ಯಾರೂ ಇಲ್ಲದಿರುವುದನು ನಾನು ಗಮನಿಸಿದೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮ್ಮ ಮಾತಿಗೆ ಪೂರ್ಣ ಲಕ್ಷ್ಯವಿಟ್ಟಿದ್ದೆನು. ಆದರೆ, ನಿಮ್ಮಲ್ಲಿ ಯೋಬನ ತಪ್ಪನ್ನು ರುಜುಪಡಿಸುವವರೂ, ಯೋಬನ ವಾದಗಳಿಗೆ ಸರಿಯಾಗಿ ಉತ್ತರ ಕೊಡುವವರೂ ನಿಮ್ಮಲ್ಲಿ ಯಾರೂ ಇಲ್ಲ.