Job 32:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿ ಯೌವನಸ್ಥನಾದ ಎಲೀಹು ಸಹ ಇದ್ದನು. ಎಲೀಹು ಬರಕೇಲನ ಮಗನು. ಬರಕೇಲನು ಬೂಜ್ ಕುಲದವನು. ಎಲೀಹು, ರಾಮ್ ಸಂತಾನಕ್ಕೆ ಸೇರಿದವನು. ಎಲೀಹುವಿಗೆ ಯೋಬನ ಮೇಲೆ ಬಹು ಕೋಪಬಂದಿತು. ಯಾಕೆಂದರೆ ಯೋಬನು ತಾನು ದೇವರಿಗಿಂತಲೂ ನೀತಿವಂತನೆಂದು ಪ್ರತಿಪಾದಿಸುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ಬೂಜ್ ಕುಲಕ್ಕೂ, ರಾಮ್ ಗೋತ್ರಕ್ಕೂ ಸೇರಿದ ಬರಕೇಲನ ಮಗನಾದ ಎಲೀಹುವಿಗೆ ಸಿಟ್ಟೇರಿತು; ಯೋಬನು ದೇವರಿಗಿಂತಲೂ ತಾನೇ ನ್ಯಾಯವಂತನೆಂದು ಎಣಿಸಿಕೊಂಡಿದ್ದರಿಂದ ಅವನ ಮೇಲೆ ಎಲೀಹುವಿಗೆ ಸಿಟ್ಟು ಬಂತು.
Kannada BSI Bible 2016
ಆಗ ರಾಮನ ಬಂಧುವಾದ ಬೂಜ್‌ನಾದ ಬರಕೇಲನ ಮಗನಾದ ಎಲೀಹುವಿನ ಕೋಪ ಯೋಬನ ಮೇಲೆ ಉರಿಯಿತು, ಅವನು ದೇವರಿಗಿಂತ ತನ್ನನ್ನು ನೀತಿವಂತ ನೆಂದು ಸ್ಥಾಪಿಸಿದ್ದರಿಂದ ಅವನ ಕೋಪ ಉರಿಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಬೂಜ್ ಕುಲಕ್ಕೂ ರಾಮ್ ಗೋತ್ರಕ್ಕೂ ಸೇರಿದ ಬರಕೇಲನ ಮಗನಾದ ಎಲೀಹುವಿಗೆ ಸಿಟ್ಟೇರಿತು; ಯೋಬನು ದೇವರಿಗಿಂತಲೂ ತಾನೇ ನ್ಯಾಯವಂತನೆಂದು ಎಣಿಸಿಕೊಂಡದರಿಂದ ಅವನ ಮೇಲೆ ಎಲೀಹುವಿಗೆ ಸಿಟ್ಟು ಹತ್ತಿತು.
Kannada Bible (KNCL) BSI 2016
ಆಗ ಬೂಜ್‍ನವನಾದ ಬರಕೇಲನ ಮಗ ಎಲೀಹುವನಿಗೆ ಸಿಟ್ಟೇರಿತು. ಇವನು ರಾಮ್‍ಗೋತ್ರಕ್ಕೆ ಸೇರಿದವನು. ಯೋಬನು ತಾನು ದೇವರಿಗಿಂತ ನ್ಯಾಯವಂತನೆಂದು ಎಣಿಸಿಕೊಂಡ ಕಾರಣ ಎಲೀಹುವನಿಗೆ ಸಿಟ್ಟುಹತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ರಾಮ ಗೋತ್ರದ ಬೂಜ್ಯನಾದ ಬರಕೇಲನ ಮಗ ಎಲೀಹು, ಯೋಬನ ಮೇಲೆ ಬಹು ಕೋಪಗೊಂಡನು. ಯೋಬನು ದೇವರಿಗಿಂತ ತನ್ನನ್ನು ನ್ಯಾಯವಂತನೆಂದು ಸ್ಥಾಪಿಸಿದ್ದರಿಂದ, ಎಲೀಹು ಅವನ ಮೇಲೆ ಕೋಪಗೊಂಡನು.