Job 32:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲೀಹುವಿಗೆ ಯೋಬನ ಮೂವರ ಸ್ನೇಹಿತರ ಮೇಲೆಯೂ ಬಹು ಕೋಪಬಂದಿತು. ಯಾಕೆಂದರೆ ಯೋಬನ ಪ್ರಶ್ನೆಗಳಿಗೆ ಪರಿಣಾಮಕಾರಿಯಾದ ಉತ್ತರವನ್ನು ಕೊಟ್ಟು ಯೋಬನೇ ತಪ್ಪಿತಸ್ಥನೆಂದು ನಿರೂಪಿಸಲು ಯೋಬನ ಮೂವರು ಗೆಳೆಯರಿಗೆ ಗೊತ್ತಿರಲಿಲ್ಲ. ಆದಕಾರಣ, ದೇವರೇ ತಪ್ಪಿತಸ್ಥನೆಂದು ತೋರಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅವನ ಮೂವರು ಸ್ನೇಹಿತರು ಯೋಬನನ್ನು ಖಂಡಿಸತಕ್ಕ ಉತ್ತರವನ್ನು ಹೇಳಲಾರದೆ ಹೋದುದರಿಂದ ಅವನು ಅವರ ಮೇಲೂ ಕೋಪಿಸಿಕೊಂಡನು.
Kannada BSI Bible 2016
ಅವನ ಮೂವರು ಸ್ನೇಹಿತರ ಮೇಲೆಯೂ ಅವರು ಉತ್ತರ ಕಂಡುಕೊಳ್ಳದೆ ಯೋಬನನ್ನು ಖಂಡಿಸಿದ್ದರಿಂದ ಅವನ ಕೋಪ ಉರಿಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವನ ಮೂವರು ಸ್ನೇಹಿತರು ಯೋಬನನ್ನು ಖಂಡಿಸತಕ್ಕ ಉತ್ತರವನ್ನು ಹೇಳಲಾರದೆ ಹೋದದರಿಂದ ಅವನು ಅವರ ಮೇಲೆಯೂ ಕೋಪಿಸಿಕೊಂಡನು.
Kannada Bible (KNCL) BSI 2016
ಯೋಬನ ಆ ಮೂವರು ಮಿತ್ರರ ಮೇಲೂ ಅವನು ಕೋಪಗೊಂಡನು. ಏಕೆಂದರೆ ಯೋಬನಿಗೆ ತಕ್ಕ ಉತ್ತರ ಕೊಡಲಾಗದೆ ದೇವರನ್ನೇ ತಪ್ಪಿತಸ್ಥರನ್ನಾಗಿಸಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಬನ ಮೂವರು ಸ್ನೇಹಿತರ ಮೇಲೆಯೂ ಎಲೀಹು ಕೋಪಗೊಂಡನು. ಅವರು ಉತ್ತರ ಕಂಡುಕೊಳ್ಳದೆ, ಯೋಬನನ್ನು ಖಂಡಿಸಿದ್ದರಿಂದ ಎಲೀಹುವಿನ ಕೋಪ ಉರಿಯಿತು.