Job 32:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಎಲೀಹು ಮಾತಾಡಲಾರಂಭಿಸಿ ಹೀಗೆಂದನು: “ನಾನು ವಯಸ್ಸಿನಲ್ಲಿ ಚಿಕ್ಕವನು. ನೀವು ವೃದ್ಧರು. ಆದಕಾರಣ, ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸಲು ಹಿಂಜರಿದೆನು ಮತ್ತು ಹೆದರಿಕೊಂಡಿದ್ದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಆ ಎಲೀಹು ಇಂತೆಂದನು, “ನಾನು ಯೌವನಸ್ಥನು, ನೀವು ನನಗಿಂತ ಹಿರಿಯರು; ಆದುದರಿಂದ ಸಂಕೋಚಪಟ್ಟು ನನ್ನ ಅಭಿಪ್ರಾಯವನ್ನು ನಿಮಗೆ ಅರಿಕೆಮಾಡಲು ಹೆದರಿದೆನು.”
Kannada BSI Bible 2016
ಆಗ ಬೂಜ್‌ನಾದ ಬರಕೇಲನ ಮಗನಾದ ಎಲೀಹು ಉತ್ತರಕೊಟ್ಟು ಹೇಳಿದ್ದೇನೆಂದರೆ--ನಾನು ಒಳ್ಳೇಪ್ರಾಯದವನು, ನೀವು ನೆರೆಯವರು; ಆದದ ರಿಂದ ನಾನು ಹೆದರಿ ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವದಕ್ಕೆ ಭಯಪಟ್ಟೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಆ ಎಲೀಹು ಇಂತೆಂದನು - ನಾನು ಯೌವನಸ್ಥನು, ನೀವು ಅತಿವೃದ್ಧರು; ಆದದರಿಂದ ಸಂಕೋಚಪಟ್ಟು ನನ್ನ ಅಭಿಪ್ರಾಯವನ್ನು ನಿಮಗೆ ಅರಿಕೆ ಮಾಡಲು ಅಂಜಿದೆನು.
Kannada Bible (KNCL) BSI 2016
ಆಗ ಬೂಜಿನವನಾದ ಬರಕೇಲನ ಮಗ ಎಲೀಹುವನು ಕೊಟ್ಟ ಉತ್ತರ: “ನಾನು ಕಿರಿಯವನು, ನೀವು ಎಷ್ಟೋ ಹಿರಿಯವರು ಎಂದೇ ಸಂಕೋಚಪಟ್ಟೆನು ನನ್ನ ಅಭಿಪ್ರಾಯ ತಿಳಿಸಲು ಅಂಜಿದೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಬೂಜ್ಯನಾದ ಬರಕೇಲನ ಮಗ ಎಲೀಹು ಹೇಳಿದ್ದೇನೆಂದರೆ: “ನಾನು ಪ್ರಾಯದಲ್ಲಿ ಯುವಕನು, ನೀವು ಪ್ರಾಯಸ್ಥರು. ಆದ್ದರಿಂದ ನಾನು ಸಂಕೋಚಗೊಂಡು ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವುದಕ್ಕೆ ಭಯಪಟ್ಟೆನು.