Job 33:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದರೆ ಯೋಬನೇ, ಈ ವಿಷಯದಲ್ಲಿ ನೀನು ತಪ್ಪಿತಸ್ಥನಾಗಿರುವೆ. ಯಾಕೆಂದರೆ ನಾನು ಅದನ್ನು ನಿರೂಪಿಸುವೆ. ದೇವರು ಮನುಷ್ಯನಿಗಿಂತ ದೊಡ್ಡವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ನೀನು ಹೀಗೆ ಹೇಳಿದ್ದು ನ್ಯಾಯವಲ್ಲವೆಂಬುದೇ ನನ್ನ ಉತ್ತರ, ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನಷ್ಟೆ.
Kannada BSI Bible 2016
ಇಗೋ, ಈ ವಿಷಯವಾಗಿ ನೀನು ನೀತಿವಂತನಲ್ಲ; ನಾನು ನಿನಗೆ ಉತ್ತರ ಕೊಡುತ್ತೇನೆ; ಏನಂದರೆ ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನೀನು ಹೀಗೆ ಆಡಿದ್ದು ನ್ಯಾಯವಲ್ಲವೆಂಬದೇ ನನ್ನ ಉತ್ತರ, ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನಷ್ಟೆ.
Kannada Bible (KNCL) BSI 2016
ಹೀಗೆ ನೀನು ನುಡಿದದ್ದು ಸರಿಯಲ್ಲವೆಂಬುದೇ ನನ್ನ ಉತ್ತರ; ದೇವರು ಮನುಷ್ಯರಿಗಿಂತ ದೊಡ್ಡವನು ಎಂಬುದೇ ಇದಕ್ಕೆ ಆಧಾರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಹೀಗೆಲ್ಲಾ ನೀನು ಮಾತಾಡಿದ್ದು ಸರಿಯಲ್ಲವೆಂದು ನಾನು ನಿನಗೆ ಹೇಳುತ್ತೇನೆ. ಏಕೆಂದರೆ ದೇವರು ಮನುಷ್ಯರಿಗಿಂತ ಬಹಳ ದೊಡ್ಡವರು.