Job 33:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇದಲ್ಲದೆ ಒಬ್ಬನು ದೇವರ ಶಿಕ್ಷೆಯಿಂದ ಹಾಸಿಗೆಹಿಡಿದು ಸಂಕಟಪಡುತ್ತಿರುವಾಗ ದೇವರ ಸ್ವರಕ್ಕೆ ಕಿವಿಗೊಟ್ಟರೂ ಕೊಡಬಹುದು. ದೇವರು ಅವನನ್ನು ಎಲುಬುಗಳೆಲ್ಲಾ ಬಾಧಿಸುವಂಥ ನೋವಿನಿಂದ ಎಚ್ಚರಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಸಂಕಟದಿಂದಲೂ, ನಿತ್ಯವಾದ ಎಲುಬುಗಳ ನೋವಿನಿಂದಲೂ, ಮನುಷ್ಯನು ಹಾಸಿಗೆಯ ಮೇಲೆ ಶಿಕ್ಷಿಸಲ್ಪಡುವನು.
Kannada BSI Bible 2016
ಅವನು ತನ್ನ ಹಾಸಿಗೆಯಲ್ಲಿ ನೋವಿನಿಂದ ಶಿಕ್ಷಿಸ ಲ್ಪಡುತ್ತಾನೆ; ಅವನ ಎಲುಬುಗಳಿಗೆಲ್ಲಾ ಕಠಿಣವಾದ ನೋವು ಉಂಟು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಸಂಕಟದಿಂದಲೂ ನಿತ್ಯವಾದ ಅಸ್ಥಿಪೀಡನದಿಂದಲೂ ಮನುಷ್ಯನು ಹಾಸಿಗೆಯ ಮೇಲೆ ಶಿಕ್ಷಿಸಲ್ಪಡುವನು.
Kannada Bible (KNCL) BSI 2016
ಇದಲ್ಲದೆ, ಮಾನವ ವ್ಯಾಧಿಯಿಂದ ಹಾಸಿಗೆ ಹಿಡಿದಿರುವಾಗ ಅವನನ್ನು ತಿದ್ದುತ್ತಾನೆ ಅವನ ದೇಹ ನರಳುತ್ತಿರುವಾಗ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇದಲ್ಲದೆ ಮನುಷ್ಯನು ತನ್ನ ಹಾಸಿಗೆಯಲ್ಲಿ ನೋವಿನಿಂದ ಬಿದ್ದಿರುವಾಗ, ಅವನ ಎಲುಬುಗಳಿಗೆ ನೋವು ಉಂಟಾದಾಗ, ದೇವರು ಅವನನ್ನು ತಿದ್ದುತ್ತಾರೆ.