Job 33:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಅವನು ದೇವರಿಗೆ ಪ್ರಾರ್ಥಿಸಲು ಆತನು ಅವನ ಪ್ರಾರ್ಥನೆಗೆ ಉತ್ತರಕೊಡುವನು. ಅವನು ಆನಂದ ಧ್ವನಿಗೈದು ದೇವರನ್ನು ಆರಾಧಿಸುವನು; ಆತನ ಮುಂದೆ ನೀತಿವಂತನಾಗಿ ಜೀವಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ದೇವರನ್ನು ಪ್ರಾರ್ಥಿಸಿ ಆತನ ಒಲುಮೆಗೆ ಪಾತ್ರನಾಗಿ, ಆತನ ದರ್ಶನ ಮಾಡಿ ಉತ್ಸಾಹದಿಂದ ಧ್ವನಿಗೈದು, ತಿರುಗಿ ಆತನಿಂದ ನೀತಿವಂತನೆಂದು ಎನ್ನಿಸಿಕೊಳ್ಳುವನು.
Kannada BSI Bible 2016
ಅವನು ದೇವರಿಗೆ ಬಿನ್ನಹ ಮಾಡು ವನು; ಆತನು ಅವನಿಗೆ ಕೃಪಾಳುವಾಗಿರುವನು. ಅವನು ಆತನ ಮುಖವನ್ನು ಸಂತೋಷದಿಂದ ನೋಡುವನು; ಆತನು ಮನುಷ್ಯನಿಗೆ ತನ್ನ ನೀತಿಯನ್ನು ಅನುಗ್ರಹಿ ಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ದೇವರನ್ನು ಪ್ರಾರ್ಥಿಸಿ ಆತನ ಒಲುಮೆಗೆ ಪಾತ್ರನಾಗಿ ಆತನ ದರ್ಶನ ಮಾಡಿ ಉತ್ಸಾಹಧ್ವನಿಗೈದು ತಿರಿಗಿ ಆತನಿಂದ ನೀತಿವಂತನೆನಿಸಿಕೊಳ್ಳುವನು.
Kannada Bible (KNCL) BSI 2016
ಆಗ ಅವನು ದೇವರಿಗೆ ಪ್ರಾರ್ಥನೆ ಮಾಡುವನು ಆತನ ಒಲುಮೆಗೆ ಪಾತ್ರನಾಗುವನು. ಹರ್ಷೋದ್ಗಾರದಿಂದ ಆತನ ಸನ್ನಿಧಿಗೆ ಬರುವನು ಮತ್ತೆ ಆತನಿಂದ ಸತ್ಯವಂತ ಎನಿಸಿಕೊಳ್ಳುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆ ಮನುಷ್ಯನು ದೇವರಿಗೆ ಪ್ರಾರ್ಥನೆಮಾಡುವನು; ದೇವರು ಅವನಿಗೆ ತಮ್ಮ ಮೆಚ್ಚುಗೆಯನ್ನು ನೀಡುವರು; ಅವನು ಆನಂದ ಧ್ವನಿಯಿಂದ ದೇವರ ಮುಖವನ್ನು ನೋಡುವನು; ದೇವರು ಅವನನ್ನು ನೀತಿವಂತನೆಂದು ಪುನಃಸ್ಥಾಪಿಸುವರು.