Job 33:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಬನೇ, ನೀನು ಏನಾದರೂ ಹೇಳಬೇಕೆಂದಿದ್ದರೆ, ಅದನ್ನು ನಾನು ಕೇಳುವಂತಾಗಲಿ. ಮುನ್ನಡೆದು ಮಾತಾಡು, ಯಾಕೆಂದರೆ ನಿನ್ನನ್ನು ನೀತಿವಂತನೆಂದು ಸ್ಥಾಪಿಸಲು ನನಗೆ ಸಂತೋಷ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಏನಾದರೂ ಹೇಳಬೇಕೆಂದಿದ್ದರೆ ನನಗೆ ಉತ್ತರವಾಗಿ ಹೇಳು, ಮಾತನಾಡು, ನಿನ್ನನ್ನು ನೀತಿವಂತನೆಂದು ಸ್ಥಾಪಿಸಬೇಕೆಂಬುದೇ ನನ್ನ ಆಶೆ.
Kannada BSI Bible 2016
ನಿನಗೆ ಹೇಳುವದಕ್ಕೆ ಏನಾದರೂ ಇದ್ದರೆ ನನಗೆ ಉತ್ತರ ಕೊಡು; ಮಾತನಾಡು, ನಿನ್ನನ್ನು ನೀತಿವಂತನೆಂದು ನಿರ್ಣಯಿಸುವದಕ್ಕೆ ಇಚ್ಚಿಸುತ್ತೇನೆ.ಇಲ್ಲದಿದ್ದರೆ ನಾನು ಹೇಳುವದನ್ನು ಕೇಳು. ಮೌನ ವಾಗಿರು, ನಾನು ನಿನಗೆ ಜ್ಞಾನವನ್ನು ಕಲಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಏನಾದರೂ ಹೇಳಬೇಕೆಂದಿದ್ದರೆ ನನಗೆ ಉತ್ತರವಾಗಿ ಹೇಳು, ಮಾತಾಡು, ನಿನ್ನನ್ನು ನೀತಿವಂತನೆಂದು ಸ್ಥಾಪಿಸಬೇಕೆಂಬದೇ ನನ್ನ ಆಶೆ.
Kannada Bible (KNCL) BSI 2016
ಏನಾದರೂ ಹೇಳಬೇಕೆಂದಿದ್ದರೆ ಹೇಳು, ಉತ್ತರಕೊಡು ನನಗೆ, ನೀನು ಸತ್ಯವಂತನೆಂದು ಸ್ಥಾಪಿಸಬೇಕೆಂಬುದೇ ನನ್ನ ಬಯಕೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನಗೆ ಹೇಳುವುದಕ್ಕೆ ಏನಾದರೂ ಇದ್ದರೆ ಹೇಳು, ನನಗೆ ಉತ್ತರಕೊಡು, ಮಾತನಾಡು, ಏಕೆಂದರೆ ನಾನು ನಿನ್ನನ್ನು ನೀತಿವಂತನೆಂದು ಸ್ಥಾಪಿಸಬೇಕೆಂಬುದೇ ನನ್ನ ಆಶೆ.