Job 34:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಬುದ್ಧಿವಂತರೇ, ನನ್ನ ಮಾತುಗಳಿಗೆ ಕಿವಿಗೊಡಿ. ದೇವರು ಕೆಟ್ಟದ್ದನ್ನು ಎಂದಿಗೂ ಮಾಡುವುದಿಲ್ಲ. ಸರ್ವಶಕ್ತನಾದ ದೇವರು ಎಂದಿಗೂ ತಪ್ಪು ಮಾಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು, ಬುದ್ಧಿವಂತರೇ, ನನ್ನ ಮಾತುಗಳನ್ನು ಕೇಳಿರಿ, ದೇವರು ಕೆಟ್ಟದ್ದನ್ನು ಮಾಡುತ್ತಾನೆಂಬ ಯೋಚನೆಯೂ, ಸರ್ವಶಕ್ತನಾದ ದೇವರು ಅನ್ಯಾಯವನ್ನು ನಡೆಸುತ್ತಾನೆಂಬ ಭಾವನೆಯೂ ದೂರವಾಗಿರಲಿ!
Kannada BSI Bible 2016
ಆದದರಿಂದ ತಿಳುವಳಿಕೆಯುಳ್ಳ ಜನರೇ, ನಾನು ಹೇಳುವದನ್ನು ಕೇಳಿರಿ, ದೇವರಿಗೆ ದುಷ್ಟತ್ವವೂ ಸರ್ವ ಶಕ್ತನಿಗೆ ಅನ್ಯಾಯವೂ ದೂರವಾಗಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು, ಬುದ್ಧಿವಂತರೇ, ನನ್ನ ಮಾತುಗಳನ್ನು ಕೇಳಿರಿ, ದೇವರು ಕೆಟ್ಟದ್ದನ್ನು ಮಾಡಾನೆಂಬ ಯೋಚನೆಯೂ ಸರ್ವಶಕ್ತನು ಅನ್ಯಾಯವನ್ನು ನಡಿಸಾನೆಂಬ ಭಾವನೆಯೂ ದೂರವಾಗಿರಲಿ!
Kannada Bible (KNCL) BSI 2016
ಹೀಗಿರಲು ಬುದ್ದಿವಂತರೇ, ನನ್ನ ಮಾತುಗಳಿಗೆ ಕಿವಿಗೊಡಿ ದೇವರು ಕೆಟ್ಟದ್ದನ್ನು ಮಾಡಿಯಾನೆಂಬ ಯೋಚನೆ ದೂರವಿರಲಿ ಸರ್ವಶಕ್ತನು ಅನ್ಯಾಯವನು ಎಸಗಿಯಾನೆಂಬ ಭಾವನೆ ಬಾರದಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ಬುದ್ಧಿವಂತರೇ, ನಾನು ಹೇಳುವುದನ್ನು ಕೇಳಿರಿ, ದೇವರು ಕೆಟ್ಟದ್ದನ್ನು ಮಾಡುತ್ತಾರೆಂಬ ಯೋಚನೆ ದೂರವಿರಲಿ. ಸರ್ವಶಕ್ತರು ಅನ್ಯಾಯವನ್ನು ಎಸಗುತ್ತಾರೆಂಬ ಭಾವನೆ ದೂರವಾಗಿರಲಿ.