Job 34:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನ್ಯಾಯವನ್ನು ದ್ವೇಷಿಸುವವನು ಅಧಿಪತಿಯಾಗುವನೇ? ಯೋಬನೇ, ಬಲಿಷ್ಠನೂ ಒಳ್ಳೆಯವನೂ ಆಗಿರುವ ದೇವರನ್ನು ದೋಷಿಯೆಂಬುದಾಗಿ ತೀರ್ಪುನೀಡಲು ನಿನಗೆ ಸಾಧ್ಯವೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನ್ಯಾಯವನ್ನು ದ್ವೇಷಿಸುವವನು ಆಳ್ವಿಕೆ ಮಾಡಾನೇ? ಧರ್ಮಸ್ವರೂಪನೂ, ಮಹಾಶಕ್ತನೂ ಆಗಿರುವಾತನನ್ನು ಕೆಟ್ಟವನೆಂದು ನಿರ್ಣಯಿಸುವೆಯಾ?
Kannada BSI Bible 2016
ನ್ಯಾಯವನ್ನು ಹಗೆಮಾಡುವ ವನು ಆಳುವನೋ? ಘನವಾದ ನೀತಿವಂತನನ್ನು ನೀನು ಖಂಡಿಸುತ್ತೀಯೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನ್ಯಾಯವನ್ನು ದ್ವೇಷಿಸುವವನು ಕಟ್ಟುಪಾಡು ಮಾಡಾನೇ? ಧರ್ಮಸ್ವರೂಪನೂ ಮಹಾಶಕ್ತನೂ ಆಗಿರುವಾತನನ್ನು ಕೆಟ್ಟವನೆಂದು ನಿರ್ಣಯಿಸುವಿಯಾ?
Kannada Bible (KNCL) BSI 2016
ನ್ಯಾಯವನ್ನು ದ್ವೇಷಿಸುವವನು, ಶಿಸ್ತನು ಪಾಲಿಸುವನೋ? ಸತ್ಯಸ್ವರೂಪಿ, ಸರ್ವಶಕ್ತ ಆದ ದೇವರನು ಕೆಟ್ಟವನೆನ್ನುವಿಯೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನ್ಯಾಯವನ್ನು ದ್ವೇಷಿಸುವ ದೇವರು, ಆಳ್ವಿಕೆಮಾಡಲು ಸಾಧ್ಯವೇ? ನೀತಿವಂತರೂ, ಸರ್ವಶಕ್ತರೂ ಆಗಿರುವ ದೇವರ ಮೇಲೆ ನೀನು ತಪ್ಪುಹೊರಿಸುವಿಯೋ?