Job 34:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಬ್ಬನು ಕ್ಷಣಮಾತ್ರದೊಳಗೆ ಮಧ್ಯರಾತ್ರಿಯಲ್ಲಿ ಸಾಯಬಹುದು. ಜನರು ಕಾಯಿಲೆಯಿಂದ ಸಾಯಬಹುದು. ದುಷ್ಟರು ಸಹ ಯಾವುದೇ ಕಾರಣವಿಲ್ಲದೆ ಸಾಯಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕ್ಷಣ ಮಾತ್ರದೊಳಗೆ ಸಾಯುವರು; ಮಧ್ಯರಾತ್ರಿಯಲ್ಲೇ ಪ್ರಜೆಗಳು ಕದಲಿ ಇಲ್ಲವಾಗುವರು, ಮನುಷ್ಯನ ಕೈ ಸೋಕದೆ ಬಲಿಷ್ಠರೂ ಅಪಹರಿಸಲ್ಪಡುವರು.
Kannada BSI Bible 2016
ಅವರು ಕ್ಷಣಮಾತ್ರದಲ್ಲಿ ಸಾಯುತ್ತಾರೆ; ಮಧ್ಯ ರಾತ್ರಿಯಲ್ಲಿ ಜನರು ಕಳವಳಗೊಂಡು ಗತಿಸಿ ಹೋಗುತ್ತಾರೆ; ಪರಾಕ್ರಮಿಗಳು ಕೈ ಸೋಕದೆ ತೆಗೆಯಲ್ಪಡುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕ್ಷಣಮಾತ್ರದೊಳಗೆ ಮಧ್ಯರಾತ್ರಿಯಲ್ಲೇ ಸಾಯುವರು, ಪ್ರಜೆಗಳು ಕದಲಿ ಇಲ್ಲವಾಗುವರು, ಮನುಷ್ಯನ ಕೈ ಸೋಕದೆ ಬಲಿಷ್ಠರೂ ಅಪಹರಿಸಲ್ಪಡುವರು.
Kannada Bible (KNCL) BSI 2016
ಕ್ಷಣಮಾತ್ರದೊಳು, ನಡುರಾತ್ರಿಯೊಳು ಸತ್ತುಹೋಗುವರು ನಾಡಿನ ಪ್ರಜೆಗಳು ತಲ್ಲಣಗೊಂಡು ಇಲ್ಲದೆಹೋಗುವರು ಮನುಷ್ಯರ ಕೈಸೋಂಕದೆಯೆ ಪರಾಕ್ರಮಿಗಳು ಮಾಯವಾಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರು ಮಧ್ಯರಾತ್ರಿಯಲ್ಲಿ ಕ್ಷಣಮಾತ್ರದಲ್ಲಿ ಸಾಯುತ್ತಾರೆ; ಅವರು ತಲ್ಲಣಗೊಂಡು ಇಲ್ಲದೆ ಹೋಗುತ್ತಾರೆ; ಪರಾಕ್ರಮಿಗಳು ಸಹ ಮಾನವರ ಕೈ ಒಳಪಡದೆ ಗತಿಸಿಹೋಗುತ್ತಾರೆ.”