Job 34:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಲಿಷ್ಠರು ತಪ್ಪು ಮಾಡಿದಾಗ ದೇವರು ಅವರನ್ನು ವಿಚಾರಿಸದೆ ನಾಶಮಾಡಿ ಅವರ ಸ್ಥಳದಲ್ಲಿ ಬೇರೆಯವರನ್ನು ನೆಲೆಗೊಳಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವ ವಿಮರ್ಶಕರೂ ಇಲ್ಲದೆ ತೀರ್ಮಾನಿಸಿ ಬಲಿಷ್ಠರನ್ನು ಮುರಿದು, ಅವರ ಸ್ಥಾನದಲ್ಲಿ ಇತರರನ್ನು ನಿಲ್ಲಿಸುವನು.
Kannada BSI Bible 2016
ಲೆಕ್ಕವಿಲ್ಲದ ಪರಾಕ್ರಮಿಗಳನ್ನು ಚೂರು ಚೂರು ಮಾಡಿ, ಮತ್ತೊಬ್ಬರನ್ನು ಅವರ ಸ್ಥಳದಲ್ಲಿ ನಿಲ್ಲಿಸು ತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವ ವಿಮರ್ಶೆಯೂ ಇಲ್ಲದೆ ತೀರ್ಮಾನಿಸಿ ಬಲಿಷ್ಠರನ್ನು ಮುರಿದು ಅವರ ಸ್ಥಾನದಲ್ಲಿ ಇತರರನ್ನು ನಿಲ್ಲಿಸುವನು.
Kannada Bible (KNCL) BSI 2016
ವಿಚಾರಣೆ ಇಲ್ಲದೆಯೆ ಪರಾಕ್ರಮಿಗಳನು ಸದೆಬಡಿಯುವನು ಅವರ ಸ್ಥಾನದಲ್ಲಿ ಇತರರನ್ನು ನಿಲ್ಲಿಸಬಲ್ಲನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾವ ವಿಚಾರಣೆ ಇಲ್ಲದೆಯೇ ದೇವರು ಪರಾಕ್ರಮಿಗಳನ್ನು ದಂಡಿಸಬಹುದು. ದೇವರು ಮತ್ತೊಬ್ಬರನ್ನು ಅವರ ಸ್ಥಾನದಲ್ಲಿ ನಿಲ್ಲಿಸಲು ಸಾಧ್ಯ.