Job 34:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೋಬನೇ, ನೀನು ಮಾರ್ಪಾಟಾಗದೆ ದೇವರಿಂದ ಪ್ರತಿಫಲವನ್ನು ಅಪೇಕ್ಷಿಸುವುದೇಕೆ? ಯೋಬನೇ, ಇದು ನಿನ್ನ ನಿರ್ಧಾರ, ನನ್ನದಲ್ಲ. ನಿನ್ನ ಆಲೋಚನೆಯನ್ನು ನನಗೆ ತಿಳಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಕೊಡುವ ಪ್ರತಿಫಲವನ್ನು ಬೇಡವೆನ್ನುವುದೇಕೆ? ಅದು ನಿನ್ನ ಮನಸ್ಸಿಗೆ ಒಪ್ಪಿತವಾಗಿರಬೇಕೋ? ನೀನೇ ಆರಿಸಿಕೋ, ನಾನು ಆರಿಸಿಕೊಳ್ಳಲಾರೆನು. ನಿನಗೆ ತಿಳಿದದ್ದನ್ನು ತಿಳಿಸು.
Kannada BSI Bible 2016
ನಿನ್ನ ಮನಸ್ಸಿನ ಪ್ರಕಾರ ಇರ ಬೇಕೋ? ನೀನು ತಿರಸ್ಕರಿಸಿದರೂ ಆದು ಕೊಂಡರೂ ಆತನು ಪ್ರತಿಫಲ ಕೊಡುವನು ನಾನಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಕೊಡುವ ಪ್ರತಿಫಲವನ್ನು ಬೇಡವೆನ್ನುವದೇಕೆ? ಅದು ನಿನ್ನ ಮನಸ್ಸಿಗೆ ಒಪ್ಪಿತವಾಗಿರಬೇಕೋ? ನೀನೇ ಆರಿಸಿಕೋ, ನಾನು ಆರಿಸಿಕೊಳ್ಳಲಾರೆನು. ನಿನಗೆ ತಿಳಿದದ್ದನ್ನು ತಿಳಿಸು.
Kannada Bible (KNCL) BSI 2016
ದೇವರು ಅಂಥವರನ್ನು ದಂಡಿಸಬೇಕೆನ್ನುತ್ತೀಯೋ? ಆತನ ತೀರ್ಪನ್ನು ನೀನೇ ಅಲ್ಲಗಳೆದಿರುವೆಯಲ್ಲವೆ? ಈಗ ನಾನು ಹೇಳಲಾರೆ, ನೀನೇ ಹೇಳು, ನಿನ್ನ ಅಭಿಪ್ರಾಯವನು ನಮಗೆ ತಿಳಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀನು ಪಶ್ಚಾತ್ತಾಪಪಡಲು ನಿರಾಕರಿಸಿದಾಗ, ದೇವರು ನಿನಗೆ ತಕ್ಕ ದಂಡನೆಯನ್ನು ಕೊಡಬಾರದೆ? ಇದನ್ನು ನೀನೇ ತೀರ್ಮಾನಿಸು, ನಾನು ತೀರ್ಮಾನಿಸುವುದಿಲ್ಲ; ಆದ್ದರಿಂದ ನಿನಗೆ ತಿಳಿದದ್ದನ್ನು ನನಗೆ ತಿಳಿಸು.”