Job 34:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ತನ್ನ ಪಾಪಕ್ಕೆ ಇನ್ನೂ ಕೂಡಿಸಿಕೊಳ್ಳುತ್ತಿದ್ದಾನೆ; ನಮ್ಮ ಮಧ್ಯದಲ್ಲಿ ತನ್ನ ದುಷ್ಟತನವನ್ನು ಅಧಿಕಮಾಡಿಕೊಳ್ಳುತ್ತಿದ್ದಾನೆ; ದೇವದ್ರೋಹವನ್ನು ಹೆಚ್ಚಿಸಿಕೊಳ್ಳುತ್ತಿದ್ದಾನೆ.” ಎಂದು ನನಗೆ ಹೇಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅಪರಾಧವನ್ನಲ್ಲದೆ ದೈವದ್ರೋಹವನ್ನೂ ಮಾಡಿದ್ದಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆಹೊಡೆದು, ದೇವರಿಗೆ ವಿರುದ್ಧವಾಗಿ ಅಧಿಕ ಮಾತುಗಳನ್ನು ಆಡುತ್ತಾನೆ” ಎಂದು ನನಗೆ ಹೇಳುವರು.
Kannada BSI Bible 2016
ತನ್ನ ಪಾಪಕ್ಕೆ ದ್ರೋಹ ವನ್ನು ಕೂಡಿಸುತ್ತಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆ ತಟ್ಟುತ್ತಾನೆ; ದೇವರಿಗೆ ವಿರೋಧವಾಗಿ ತನ್ನ ಮಾತು ಗಳನ್ನು ಅಧಿಕಮಾಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅಪರಾಧವನ್ನಲ್ಲದೆ ದೇವದ್ರೋಹವನ್ನೂ ಮಾಡಿದ್ದಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆಹೊಡೆದು ದೇವರಿಗೆ ವಿರುದ್ಧವಾಗಿ ಅಧಿಕಪ್ರಸಂಗ ಮಾಡುತ್ತಾನೆ ಎಂದು ನನಗೆ ಹೇಳುವರು.
Kannada Bible (KNCL) BSI 2016
ಅವನು ಅಪರಾಧಿ ಮಾತ್ರವಲ್ಲ, ದೇವದ್ರೋಹವೆಸಗಿದ್ದಾನೆ ನಮ್ಮ ಮಧ್ಯೆ ಸಂದೇಹವನು ಎಬ್ಬಿಸಿದ್ದಾನೆ ದೇವರಿಗೆ ವಿರುದ್ಧವಾಗಿ ಅಧಿಕ ಪ್ರಸಂಗಮಾಡುತ್ತಾನೆ’.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಬನು ತನ್ನ ಪಾಪಕ್ಕೆ ದೇವರಿಗೆ ಎದುರಾಗಿ ಪ್ರತಿಭಟನೆಯನ್ನು ಸಹ ಕೂಡಿಸುತ್ತಿದ್ದಾನೆ; ಅಪಹಾಸ್ಯದಿಂದ ನಮ್ಮ ಮಧ್ಯದಲ್ಲಿ ಚಪ್ಪಾಳೆ ತಟ್ಟುತ್ತಾನೆ; ದೇವರಿಗೆ ವಿರುದ್ಧ ಹೆಚ್ಚು ಮಾತುಗಳನ್ನಾಡುತ್ತಾನೆ,’ ಎಂದು ನನಗೆ ಹೇಳುತ್ತಿದ್ದಾರೆ.”