Job 35:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮನ್ನು ಪಕ್ಷಿಗಳಿಗಿಂತಲೂ ಪ್ರಾಣಿಗಳಿಗಿಂತಲೂ ಜ್ಞಾನಿಗಳನ್ನಾಗಿ ಮಾಡುವ ದೇವರೆಲ್ಲಿ?’ ಎಂದು ಅವರು ಕೇಳುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಕಾಡು ಮೃಗಗಳಿಗಿಂತ ನಮಗೆ ಹೆಚ್ಚು ಜ್ಞಾನವನ್ನು ಬೋಧಿಸುತ್ತಾ, ಆಕಾಶದ ಪಕ್ಷಿಗಳಿಗಿಂತ ಹೆಚ್ಚು ಬುದ್ಧಿಯನ್ನು ನಮಗೆ ಕಲಿಸುತ್ತಾನೆ’ ಎಂದು ಹೇಳುವುದೇ ಇಲ್ಲ.
Kannada BSI Bible 2016
ಆತನು ಭೂಮಿಯ ಮೃಗಗಳಿಗಿಂತ ನಮಗೆ ಹೆಚ್ಚು ಕಲಿಸಿ, ಆಕಾಶದ ಪಕ್ಷಿಗಳಿಗಿಂತ ನಮಗೆ ಅಧಿಕ ಜ್ಞಾನವನ್ನು ಕೊಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಾಡುಮೃಗಗಳಿಗಿಂತ ನಮಗೆ ಹೆಚ್ಚು ಜ್ಞಾನವನ್ನು ಬೋಧಿಸುತ್ತಾ ಆಕಾಶದ ಪಕ್ಷಿಗಳಿಗಿಂತ ಹೆಚ್ಚು ಬುದ್ಧಿಯನ್ನು ನಮಗೆ ಕಲಿಸುತ್ತಾನೆ ಎಂದು ಹೇಳಿಕೊಳ್ಳುವದೇ ಇಲ್ಲ.
Kannada Bible (KNCL) BSI 2016
ಕಾಡುಮೃಗಗಳಿಗಿಂತ ನಮಗೆ ಹೆಚ್ಚು ಜ್ಞಾನವನ್ನೀಯುವವನೆಲ್ಲಿ? ಆಕಾಶದ ಪಕ್ಷಿಗಳಿಗಿಂತ ಹೆಚ್ಚು ಬುದ್ದಿಕಲಿಸುವನೆಲ್ಲಿ? ಎನ್ನುವುದೇ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭೂಮಿಯ ಮೃಗಗಳಿಗಿಂತ ನಮಗೆ ಹೆಚ್ಚು ಬುದ್ಧಿಕಲಿಸಿಕೊಡುವ ದೇವರು ಎಲ್ಲಿ? ಆಕಾಶದ ಪಕ್ಷಿಗಳಿಗಿಂತ ನಮಗೆ ಅಧಿಕ ಜ್ಞಾನವನ್ನು ಕೊಡುವ ದೇವರು ಎಲ್ಲಿ?’ ಎಂದು ಯಾರೂ ಹೇಳುವುದಿಲ್ಲ.