Job 35:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಬನೇ, ನೀನು, ‘ದೇವರನ್ನು ಕಾಣಲಾರೆನು’ ಎಂದು ಹೇಳುವಾಗ ಆತನು ನಿನಗೆ ಕಿವಿಗೊಡುವುದಿಲ್ಲ. ನಿನ್ನ ವ್ಯಾಜ್ಯವು ಆತನ ಮುಂದೆ ಇರುವುದರಿಂದ ನೀನು ಆತನಿಗಾಗಿ ಕಾದುಕೊಂಡಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಆತನು ಕಾಣುವುದಿಲ್ಲ, ನನ್ನ ವ್ಯಾಜ್ಯವು ಆತನ ಮುಂದೆ ಇದೆ, ಆತನನ್ನು ಕಾದಿರುತ್ತೇನೆ ಎಂದು ನೀನು ಹೇಳಿದರೆ ಆತನು ಕೇಳುತ್ತಾನೆಯೇ?
Kannada BSI Bible 2016
ನೀನು ಅವನನ್ನು ದೃಷ್ಟಿಸುವ ದಿಲ್ಲವೆಂದು ನೀನು ಹೇಳಿದರೂ ನ್ಯಾಯತೀರ್ಪು ಅವನ ಮುಂದೆ ಇರುವದು; ಆದದರಿಂದ ನೀನು ಆತನಲ್ಲಿ ಭರವಸವಿಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಆತನು ಕಾಣುವದಿಲ್ಲ, ನನ್ನ ವ್ಯಾಜ್ಯವು ಆತನ ಮುಂದೆ ಬಿದ್ದೇ ಇದೆ, ಆತನನ್ನು ಕಾದಿರುತ್ತೇನೆ ಎಂದು ನೀನು ಹೇಳಿದರೆ ಆತನು ಕೇಳಾನೇ?
Kannada Bible (KNCL) BSI 2016
ಇಂತಿರಲು ನೀನು, ‘ಆತ ಕಾಣನು, ನನ್ನ ವ್ಯಾಜ್ಯ ಆತನ ಮುಂದಿದೆ ಆತನಿಗಾಗಿ ಕಾದಿರುವೆ’ ಎಂದುಕೊಂಡರೂ ಆತ ಕೇಳಿಯಾನೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರಲು, ‘ದೇವರು ಕಾಣುವುದಿಲ್ಲ, ನನ್ನ ವ್ಯಾಜ್ಯವು ದೇವರ ಮುಂದೆ ಇದೆ; ದೇವರಿಗಾಗಿ ಕಾದಿರುತ್ತೇನೆ,’ ಎಂದು ನೀನು ಹೇಳಿದರೆ, ದೇವರು ನಿನಗೆ ಕಿವಿಗೊಡುವರೋ?