Job 35:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಹಿಂಸೆಗೂ ಅನ್ಯಾಯಕ್ಕೂ ಒಳಗಾಗಿರುವವರು ತಮ್ಮನ್ನು ಬಲಿಷ್ಠರಿಂದ ಬಿಡಿಸಬಲ್ಲ ಯಾರಿಗಾದರೂ ಮೊರೆಯಿಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಪಾರವಾದ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾ, ಬಲಿಷ್ಠರ ಭುಜಬಲದಿಂದ ಪೀಡಿತರಾಗಿ ಕೂಗಿಕೊಳ್ಳುವರು.
Kannada BSI Bible 2016
ಬಹು ಬಲಾತ್ಕಾರದ ದೆಸೆಯಿಂದ ಬಲಾತ್ಕಾರ ಮಾಡಲ್ಪಟ್ಟವರು ಕೂಗುವಂತೆ ಅವರು ಮಾಡುತ್ತಾರೆ; ಪರಾಕ್ರಮಿಗಳ ತೋಳಿಗೋಸ್ಕರ ಮೊರೆಯಿಡುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಪಾರವಾದ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾ ಬಲಿಷ್ಠರ ಭುಜಬಲದಿಂದ ಪೀಡಿತರಾಗಿ ಕೂಗಿಕೊಳ್ಳುವರೇ ಹೊರತು
Kannada Bible (KNCL) BSI 2016
ಅಪಾರ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾರೆ. ಬಲಿಷ್ಠರ ಭುಜಬಲದಿಂದ ಪೀಡಿತರು ಕಿರಿಚಿಕೊಳ್ಳುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅಪಾರ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾರೆ; ಬಲಿಷ್ಠರ ಭುಜಬಲದಿಂದ ಪೀಡಿತರು ಕಿರಿಚಿಕೊಳ್ಳುತ್ತಾರೆ.