Job 36:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೋಬನೇ, ದೇವರು ನಿನ್ನನ್ನು ಕೇಡಿನಿಂದ ತಪ್ಪಿಸಿ ಸುರಕ್ಷಿತವೂ ಅಭಿವೃದ್ಧಿಕರವೂ ಆಗಿರುವ ಸ್ಥಳಕ್ಕೆ ಕರೆದುಕೊಂಡು ಬಂದು ನಿನಗೆ ಊಟವನ್ನು ಯಥೇಚ್ಛವಾಗಿ ಬಡಿಸಲು ಇಷ್ಟಪಡುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದೇ ಮೇರೆಗೆ ನಿನ್ನನ್ನೂ ಕಷ್ಟದೊಳಗಿಂದ ತಪ್ಪಿಸಿ, ಇಕ್ಕಟ್ಟಿಲ್ಲದ ವಿಶಾಲ ಸ್ಥಳಕ್ಕೆ ಬರಮಾಡಬೇಕೆಂದೂ, ನಿನ್ನ ಮೇಜಿನ ಆಹಾರಗಳು ತುಪ್ಪದಿಂದ ತುಂಬಿರಬೇಕೆಂಬುದು ಆತನ ಉದ್ದೇಶವಾಗಿದೆ.
Kannada BSI Bible 2016
ನಿನ್ನನ್ನು ಆತನು ಹಾಗೆಯೇ ಇಕ್ಕಟ್ಟಿನೊಳಗಿಂದ ತೆಗೆದು ಇಕ್ಕಟ್ಟಿಲ್ಲದ ವಿಶಾಲವಾದ ಸ್ಥಳಕ್ಕೆ ಬರಮಾಡ ಬಹುದಾಗಿತ್ತು; ನಿನ್ನ ಮೇಜಿನ ಮೇಲೆ ಇಡತಕ್ಕವುಗಳು ಕೊಬ್ಬಿನಿಂದ ತುಂಬಿದವುಗಳಾಗಿರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದೇ ಮೇರೆಗೆ ನಿನ್ನನ್ನೂ ಕಷ್ಟದೊಳಗಿಂದ ತಪ್ಪಿಸಿ ಇಕ್ಕಟ್ಟಿಲ್ಲದ ವಿಶಾಲಸ್ಥಳಕ್ಕೆ ಬರಮಾಡಬೇಕೆಂಬದೂ, ನಿನ್ನ ಮೇಜಿನ ಆಹಾರಗಳು ತುಪ್ಪದಿಂದ ತುಂಬಿರಬೇಕೆಂಬದೂ ಆತನ ಉದ್ದೇಶವಾಗಿದೆ.
Kannada Bible (KNCL) BSI 2016
ಅಂತೆಯೆ, ಕಷ್ಟದಿಂದ ನಿನ್ನನ್ನು ತಪ್ಪಿಸಬೇಕೆಂಬುದು ಇಕ್ಕಟ್ಟಿಲ್ಲದ ಬಯಲಿಗೆ ನಿನ್ನನ್ನು ತರಬೇಕೆಂಬುದು ನಿನ್ನ ಊಟದ ಮೇಜು ಸಮೃದ್ಧಿಯಾಗಿರಬೇಕೆಂಬುದು ದೇವರ ಉದ್ದೇಶವಾಗಿರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದೇವರು ನಿನ್ನನ್ನು ಇಕ್ಕಟ್ಟಿನೊಳಗಿಂದ ಬಿಡಿಸುವರು; ಇಕ್ಕಟ್ಟಿಲ್ಲದ ವಿಶಾಲ ಸ್ಥಳವು ನಿನಗೆ ದೊರೆಯುವುದು; ನಿನ್ನ ಆದರಣೆಗಾಗಿ ನಿನ್ನ ಮೇಜು ಉತ್ತಮ ಆಹಾರಗಳಿಂದ ತುಂಬಿರುವುದು.