Job 36:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೌದು, ದೇವರೇ ಮಹೋನ್ನತನು. ಆತನ ಮಹತ್ವವನ್ನು ನಾವು ಅರ್ಥಮಾಡಿಕೊಳ್ಳಲಾರೆವು. ಆತನು ಎಂದಿನಿಂದ ಜೀವಿಸಿರುವನೋ ನಮಗೆ ತಿಳಿಯದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ದೇವರು ಮಹೋನ್ನತನಾಗಿದ್ದಾನೆ, ನಾವು ಆತನನ್ನು ಅರಿಯಲಾರೆವು; ಆತನ ವರ್ಷಗಳು ಅಸಂಖ್ಯಾತವಾಗಿವೆ.
Kannada BSI Bible 2016
ಇಗೋ, ದೇವರು ದೊಡ್ಡವನಾಗಿದ್ದಾನೆ. ನಾವು ಆತನನ್ನು ಅರಿಯದವರಾಗಿದ್ದೇವೆ. ಆತನ ವರುಷಗಳ ಲೆಕ್ಕಕ್ಕೆ ಶೋಧನೆ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ದೇವರು ಮಹೋನ್ನತನಾಗಿದ್ದಾನೆ, ನಾವು ಆತನನ್ನು ಅರಿಯಲಾರೆವು; ಆತನ ವರುಷಗಳು ಅಸಂಖ್ಯಾತವಾಗಿವೆ.
Kannada Bible (KNCL) BSI 2016
ದೇವರೆನಿತೋ ಮಹೋನ್ನತನು ನಮ್ಮ ಅರಿವಿಗಾತನು ಎಟುಕನು ಅಸಂಖ್ಯಾತ ಆತನ ವರುಷಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಮಹೋನ್ನತರು; ದೇವರು ನಮ್ಮ ಅರಿವಿಗೆ ನಿಲುಕರು. ದೇವರ ವರ್ಷಗಳು ಅಸಂಖ್ಯಾತವಾಗಿವೆ.