Job 36:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀತಿವಂತರನ್ನು ದೇವರು ಪರಿಪಾಲಿಸುವನು; ಆತನು ಒಳ್ಳೆಯವರನ್ನು ಅಧಿಪತಿಗಳನ್ನಾಗಿ ನೇಮಿಸುವನು; ಅವರಿಗೆ ಸದಾಕಾಲ ಗೌರವ ದೊರೆಯುವಂತೆ ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀತಿವಂತರಿಂದ ತನ್ನ ಕಟಾಕ್ಷವನ್ನು ತಿರುಗಿಸದೆ, ಅರಸರೊಂದಿಗೆ ಸಿಂಹಾಸನದ ಮೇಲೆ ಶಾಶ್ವತವಾಗಿ ಕುಳಿತುಕೊಳ್ಳುವ, ಉನ್ನತಪದವಿಗೆ ಅವರನ್ನು ತರುವನು.
Kannada BSI Bible 2016
ನೀತಿವಂತರಿಂದ ತನ್ನ ಕಣ್ಣುಗಳನ್ನು ತೊಲಗಿಸುವದಿಲ್ಲ. ಅವರು ಅರಸುಗಳ ಸಂಗಡ ಸಿಂಹಾಸನದಲ್ಲಿ ಇದ್ದಾರೆ. ಹೌದು, ಆತನು ಅವರನ್ನು, ಎಂದೆಂದಿಗೂ ಸ್ಥಿರಪಡಿಸುತ್ತಾನೆ. ಅವರು ಉನ್ನತಕ್ಕೇರಿಸಲ್ಪಟ್ಟಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀತಿವಂತರಿಂದ ತನ್ನ ಕಟಾಕ್ಷವನ್ನು ತಿರುಗಿಸದೆ ಅರಸರೊಂದಿಗೆ ಸಿಂಹಾಸನದ ಮೇಲೆ ಶಾಶ್ವತವಾಗಿ ಕೂತುಕೊಳ್ಳುವ ಉನ್ನತಪದವಿಗೆ ಅವರನ್ನು ತರುವನು.
Kannada Bible (KNCL) BSI 2016
ತನ್ನ ಕಟಾಕ್ಷವನ್ನು ಸಜ್ಜನರ ಮೇಲೆ ಅಚಲವಾಗಿರಿಸುವನು ರಾಜರಂತೆ ಸಿಂಹಾಸನದ ಮೇಲೆ ಅವರನು ಕುಳ್ಳಿರಿಸುವನು ಅಮರವಾದ ಉನ್ನತ ಪದವಿಗೆ ಅವರನು ಏರಿಸುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ನೀತಿವಂತರಿಂದ ತಮ್ಮ ಕಣ್ಣುಗಳನ್ನು ತೊಲಗಿಸುವುದಿಲ್ಲ; ದೇವರು ನೀತಿವಂತರನ್ನು ಅರಸುಗಳ ಸಂಗಡ ಸಿಂಹಾಸನದಲ್ಲಿ ಕುಳ್ಳಿರಿಸುವರು; ಹೌದು, ದೇವರು ಅವರನ್ನು ಎಂದೆಂದಿಗೂ ಉನ್ನತಕ್ಕೇರಿಸುವರು.