Job 37:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಕಾಶದಲ್ಲಿ ಮೋಡಗಳು ಹೇಗೆ ತೂಗಾಡುತ್ತಿವೆ ಎಂಬುದು ನಿನಗೆ ಗೊತ್ತಿದೆಯೋ? ದೇವರ ಆಶ್ಚರ್ಯಕಾರ್ಯಗಳಲ್ಲಿ ಮೋಡಗಳು ಒಂದು ಉದಾಹರಣೆಯಷ್ಟೇ. ಅವುಗಳ ಬಗ್ಗೆ ದೇವರಿಗೆ ಸಂಪೂರ್ಣವಾಗಿ ತಿಳಿದಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಡಗಳ ತೂಗಾಟವನ್ನೂ, ಜ್ಞಾನಪೂರ್ಣನ ಅದ್ಭುತಕಾರ್ಯಗಳನ್ನೂ ತಿಳಿದುಕೊಂಡಿದ್ದಿಯಾ?
Kannada BSI Bible 2016
ಮೋಡಗಳ ತೂಗಾಟವನ್ನೂ ತಿಳುವಳಿಕೆಯಲ್ಲಿ ಸಂಪೂರ್ಣನ ಅದ್ಭುತಗಳನ್ನೂ ತಿಳು ಕೊಳ್ಳುತ್ತೀಯೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಡಗಳ ತೂಗಾಟವನ್ನೂ ಜ್ಞಾನಪೂರ್ಣನ ಅದ್ಭುತಕಾರ್ಯಗಳನ್ನೂ ತಿಳಿದುಕೊಂಡಿದ್ದೀಯಾ?
Kannada Bible (KNCL) BSI 2016
ಮೋಡಗಳ ತೇಲಾಟವನು ಬಲ್ಲೆಯಾ? ಜ್ಞಾನಪೂರ್ಣನಾ ಅದ್ಭುತಕಾರ್ಯಗಳನು ಗ್ರಹಿಸಿರುವೆಯಾ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಡಗಳ ತೂಗಾಟವನ್ನು ಬಲ್ಲೆಯಾ? ಜ್ಞಾನಪೂರ್ಣರಾದ ದೇವರ ಅದ್ಭುತಗಳನ್ನೂ ತಿಳಿದುಕೊಂಡಿರುವೆಯಾ?