Job 37:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರತಿಯೊಬ್ಬರೂ ಕೇಳಿರಿ! ದೇವರ ಧ್ವನಿಯು ಗುಡುಗಿನ ಧ್ವನಿಯಂತಿದೆ. ಆತನ ಬಾಯಿಂದ ಬರುವ ಗುಡುಗುಟ್ಟುವ ಧ್ವನಿಯನ್ನು ಕೇಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗುಡುಗುಟ್ಟುವ ದೇವರ ಧ್ವನಿಗೆ ಕಿವಿಗೊಡಿರಿ, ಆತನ ಬಾಯಿಂದ ಹೊರಡುವ ಧ್ವನಿಯನ್ನು ಕೇಳಿರಿ!
Kannada BSI Bible 2016
ಆತನ ಬಾಯಿಂದ ಹೊರಡುವ ಧ್ವನಿಯ ಶಬ್ದದ ಸ್ವರವನ್ನು ಲಕ್ಷ್ಯಕೊಟ್ಟು ಕೇಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಗುಡುಗುಟ್ಟುವ ಆತನ ಧ್ವನಿಗೆ ಕಿವಿಗೊಡಿರಿ, ಆತನ ಬಾಯಿಂದ ಹೊರಡುವ ಮೊಳಗನ್ನು ಕೇಳಿರಿ!
Kannada Bible (KNCL) BSI 2016
ದೇವರ ಧ್ವನಿಯ ಗರ್ಜನೆಯನು ಕಿವಿಗೊಟ್ಟು ಕೇಳು ಆತನ ಬಾಯಿಂದ ಹೊರಡುವ ಮಾತನು ಆಲಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ಧ್ವನಿಯ ಘರ್ಜನೆಯನ್ನು ಕೇಳಿರಿ. ದೇವರ ಬಾಯಿಂದ ಹೊರಡುವ ಮಾತನ್ನು ಲಕ್ಷ್ಯಕೊಟ್ಟು ಆಲಿಸಿರಿ.