Job 37:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಸರ್ವಶಕ್ತನಾದ ದೇವರು ಮಹೋನ್ನತನೇ ಸರಿ! ನಾವು ಆತನನ್ನು ಅರ್ಥಮಾಡಿಕೊಳ್ಳಲು ನಮಗೆ ಸಾಧ್ಯವಿಲ್ಲ. ದೇವರು ಮಹಾ ಬಲಿಷ್ಠನಾಗಿದ್ದರೂ ನಮಗೆ ಒಳ್ಳೆಯವನೂ ನ್ಯಾಯವಂತನೂ ಆಗಿದ್ದಾನೆ. ಆತನು ನಮ್ಮನ್ನು ಹಿಂಸಿಸಲು ಇಷ್ಟಪಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಂಥ ಸರ್ವಶಕ್ತನಾದ ದೇವರನ್ನು ನಾವು ಕಂಡುಹಿಡಿಯಲಾರೆವು; ಆತನ ಪರಾಕ್ರಮವು ಬಹಳ; ಆತನು ನ್ಯಾಯವನ್ನಾಗಲಿ, ಪರಿಪೂರ್ಣ ಧರ್ಮವನ್ನಾಗಲಿ ಕುಂದಿಸುವುದಿಲ್ಲ.
Kannada BSI Bible 2016
ಸರ್ವ ಶಕ್ತನನ್ನು ನಾವು ಕಂಡುಕೊಳ್ಳುವದಿಲ್ಲ; ಆತನು ಶಕ್ತಿಯಲ್ಲಿಯೂ ನ್ಯಾಯತೀರ್ಪಿನಲ್ಲಿಯೂ ಬಹುನೀತಿಯಲ್ಲಿಯೂ ಉನ್ನ ತನಾಗಿದ್ದಾನೆ; ಆತನು ಶ್ರಮೆಪಡಿಸುವದಿಲ್ಲ.ಆದ ದರಿಂದ ಮನುಷ್ಯರು ಆತನಿಗೆ ಭಯಪಡುತ್ತಾರೆ; ಹೃದಯದಲ್ಲಿ ಜ್ಞಾನಿಗಳಾದವರೆಲ್ಲರನ್ನು ಆತನು ಲಕ್ಷಿಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಂಥ ಸರ್ವಶಕ್ತನನ್ನು ನಾವು ಕಂಡುಹಿಡಿಯಲಾರೆವು; ಆತನ ಪರಾಕ್ರಮವು ಬಹಳ; ಆತನು ನ್ಯಾಯವನ್ನಾಗಲಿ ಪರಿಪೂರ್ಣಧರ್ಮವನ್ನಾಗಲಿ ಕುಂದಿಸುವದಿಲ್ಲ.
Kannada Bible (KNCL) BSI 2016
ಕಂಡುಹಿಡಿಯಲಾಗದು ಇಂಥ ಸರ್ವಶಕ್ತನನು ನಮ್ಮಿಂದ ಶಕ್ತಿಯಲೂ ಸತ್ಯದಲೂ ಪರಮ ಪರಾಕ್ರಮಿ ಆತ ನ್ಯಾಯಪೂರ್ಣನಾದ ಆತ ದಬ್ಬಾಳಿಕೆ ನಡೆಸುವವನಲ್ಲ ನ್ಯಾಯಕ್ಕಾಗಲೀ ಧರ್ಮಕ್ಕಾಗಲೀ ಆತ ಧಕ್ಕೆ ತರುವವನಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಂಥಾ ಸರ್ವಶಕ್ತರನ್ನು ನಾವು ಕಂಡುಹಿಡಿಯಲಾಗದು; ದೇವರು ಶಕ್ತಿಯಲ್ಲಿ ಉನ್ನತರಾಗಿದ್ದಾರೆ; ನ್ಯಾಯತೀರ್ಪಿನಲ್ಲಿಯೂ, ಮಹಾ ನೀತಿಯಲ್ಲಿಯೂ ದೇವರು ದಬ್ಬಾಳಿಕೆ ನಡೆಸುವವರಲ್ಲ.