Job 37:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಡೀ ಆಕಾಶಮಂಡಲದಲ್ಲೆಲ್ಲಾ ಪ್ರಕಾಶಿಸಲೆಂದು ದೇವರು ತನ್ನ ಸಿಡಿಲನ್ನು ಕಳುಹಿಸುವನು. ಅದು ಭೂಮಿಯ ಮೇಲೆಲ್ಲಾ ಪ್ರಕಾಶಿಸುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅದನ್ನು ಆಕಾಶಮಂಡಲದಲ್ಲೆಲ್ಲಾ ಹಬ್ಬಿಸಿ, ತನ್ನ ಸಿಡಿಲನ್ನು ಭೂಮಿಯ ಅಂಚುಗಳವರೆಗೂ ಬಿಡುವನು.
Kannada BSI Bible 2016
ಎಲ್ಲಾ ಆಕಾಶದ ಕೆಳಗೆ ಆತನು ಅದನ್ನು ನಡಿಸುತ್ತಾನೆ. ತನ್ನ ಮಿಂಚನ್ನು ಭೂಮಿಯ ಅಂಚುಗಳ ವರೆಗೆ ನಡಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅದನ್ನು ಆಕಾಶಮಂಡಲದಲ್ಲೆಲ್ಲಾ ಹಬ್ಬಿಸಿ ತನ್ನ ಸಿಡಿಲನ್ನು ಭೂವಿುಯ ಅಂಚುಗಳವರೆಗೂ ಬಿಡುವನು.
Kannada Bible (KNCL) BSI 2016
ಅದನ್ನು ಗಗನಮಂಡಲದೊಳು ಹರಡುತ್ತಾನೆ ಜಗದ ಅಂಚಿನ ತನಕ ಮಿಂಚು ಹೊಳೆಯುವಂತೆ ಮಾಡುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಮ್ಮ ಮಿಂಚನ್ನು ದೇವರು ಆಕಾಶಮಂಡಲದಲ್ಲಿ ಹರಡುತ್ತಾರೆ; ಅದನ್ನು ಭೂಮಿಯ ಅಂಚುಗಳವರೆಗೆ ಕಳುಹಿಸುತ್ತಾರೆ.