Job 37:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಿಡಿಲು ಪ್ರಕಾಶಿಸಿದ ನಂತರ ದೇವರ ಗರ್ಜನೆಯು ಕೇಳಿಬರುವುದು. ಆತನು ತನ್ನ ಆಶ್ಚರ್ಯಕರವಾದ ಧ್ವನಿಯಿಂದ ಗುಡುಗುಟ್ಟುವನು! ಸಿಡಿಲು ಪ್ರಕಾಶಿಸುವಾಗ ಆತನ ಧ್ವನಿಯು ಗುಡುಗುಟ್ಟುವುದು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಿಡಿಲಿನ ತರುವಾಯ ಗರ್ಜನೆಯುಂಟಾಗುವುದು, ಆತನು ತನ್ನ ಮಹಿಮೆಯ ಶಬ್ದದಿಂದ ಗುಡುಗುವನು. ಆ ಶಬ್ದವು ಕೇಳಿಸಿದ ಮೇಲೆಯೂ ಆತನು ಸಿಡಿಲುಗಳನ್ನು ತಡೆಯುವುದಿಲ್ಲ.
Kannada BSI Bible 2016
ಅದರ ತರುವಾಯ ಶಬ್ದವು ಗರ್ಜಿಸುತ್ತದೆ; ತನ್ನ ಮಹತ್ತಿನ ಶಬ್ದದಿಂದ ಗುಡುಗುತ್ತಾನೆ. ಆತನ ಶಬ್ದ ಕೇಳಲ್ಪಡುವಾಗ ಅವು ಗಳನ್ನು ಹಿಂದೆಗೆಯುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಿಡಿಲಿನ ತರುವಾಯ ಗರ್ಜನೆಯುಂಟಾಗುವದು, ಆತನು ತನ್ನ ಮಹಿಮೆಯ ಶಬ್ದದಿಂದ ಗುಡುಗುವನು. ಈ ಶಬ್ದವು ಕೇಳಿಸಿದ ಮೇಲೆಯೂ ಆತನು ಸಿಡಿಲುಗಳನ್ನು ತಡೆಯುವದಿಲ್ಲ.
Kannada Bible (KNCL) BSI 2016
ಮಿಂಚಿನ ಬಳಿಕ ಕೇಳಿಬರುವುದು ಗರ್ಜನೆಯ ಶಬ್ದ ಗುಡುಗಿನಂಥ ಗಂಭೀರವಾದ ಆತನ ಕಂಠನಾದ ಆತನ ಸ್ವರ ಕೇಳುವಾಗ ನಿಲ್ಲದು ಮಿಂಚಿನ ಹೊಳೆತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಿಂಚಿನ ತರುವಾಯ ಘರ್ಜನೆಯ ಶಬ್ದ ಕೇಳಿಬರುವುದು; ದೇವರು ಮಹತ್ತಿನ ಶಬ್ದದಿಂದ ಗುಡುಗುತ್ತಾರೆ; ದೇವರ ಸ್ವರ ಕೇಳುವಾಗ ಅದನ್ನು ತಡೆಯಲಾಗದು.