Job 38:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಬನೇ, ದುಷ್ಟರನ್ನು ಅವರು ಅಡಗಿಕೊಂಡಿರುವ ಸ್ಥಳಗಳಲ್ಲಿ ಹಿಡಿದು ನಡುಗಿಸಬೇಕೆಂದು ನೀನು ಮುಂಜಾನೆಯ ಬೆಳಕಿಗೆ ಎಂದಾದರೂ ಆಜ್ಞಾಪಿಸಿರುವಿಯಾ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭೂಮಿಯ ಅಂಚುಗಳನ್ನು ಹಿಡಿದು ದುಷ್ಟರನ್ನು ಅದರೊಳಗಿಂದ ಒದರಿಬಿಡು ಎಂದು ಉದಯಕ್ಕೆ ಅಪ್ಪಣೆಕೊಟ್ಟೆಯಾ?
Kannada BSI Bible 2016
ಅದು ಭೂಮಿಯ ಅಂಚುಗಳನ್ನು ಹಿಡಿಯುವ ಹಾಗೆಯೂ ದುಷ್ಟರು ಅದರೊಳಗಿಂದ ಝಾಡಿಸಲ್ಪಡುವ ಹಾಗೆಯೂ ಉದಯಕ್ಕೆ ಅದರ ಸ್ಥಳವನ್ನು ತಿಳಿಯಪಡಿಸಿದಿಯೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ದುಷ್ಟರನ್ನು ಅದರೊಳಗಿಂದ ಒದರಿಬಿಡು ಎಂದು ಉದಯಕ್ಕೆ ಅಪ್ಪಣೆಕೊಟ್ಟಿಯಾ?
Kannada Bible (KNCL) BSI 2016
‘ಧರಣಿಯ ಅಂಚುಗಳನು ಹಿಡಿದು ದುರುಳರನ್ನು ಅದರೊಳಗಿಂದ ಒದರಿಬಿಡು’ ಎಂದು ಅದಕ್ಕೆ ಅಪ್ಪಣೆಮಾಡಿದೆಯಾ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ದುಷ್ಟರನ್ನು ಅದರೊಳಗಿಂದ ಒದರಿಬಿಡು,’ ಎಂದು ನೀನು ಭೂಮಿಯ ಅಂಚುಗಳನ್ನು ಹಿಡಿದು ಉದಯಕ್ಕೆ ಎಂದಾದರೂ ಅಪ್ಪಣೆಮಾಡಿದೆಯಾ?