Job 38:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಬನೇ, ನೀನು ಸಮಯಕ್ಕೆ ಸರಿಯಾಗಿ ನಕ್ಷತ್ರರಾಶಿಗಳನ್ನು ಬರಮಾಡಬಲ್ಲೆಯಾ? ನೀನು ಬೇರ್ ನಕ್ಷತ್ರಗಳನ್ನು ಅದರ ಮರಿಗಳೊಂದಿಗೆ ನಡೆಸಬಲ್ಲೆಯಾ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಯಾ ಸಮಯದಲ್ಲಿ ನಕ್ಷತ್ರ ರಾಶಿಗಳನ್ನು ಬರಮಾಡುವೆಯೋ? ನಕ್ಷತ್ರ ಮಂಡಲ ಪರಿವಾರದೊಡನೆ ನಡೆಸುವೆಯಾ?
Kannada BSI Bible 2016
ನೀನು ರಾಶಿಗಳನ್ನು ಅವುಗಳ ಕಾಲದಲ್ಲಿ ಹೊರಗೆ ತರುತ್ತೀಯೋ? ಇಲ್ಲವೆ ಸಪ್ತತಾರೆಗಳನ್ನು ಅವುಗಳ ಪುತ್ರರ ಸಹಿತ ವಾಗಿ ನೀನು ನಡಿಸುತ್ತೀಯೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆಯಾ ಸಮಯದಲ್ಲಿ ನಕ್ಷತ್ರರಾಶಿಗಳನ್ನು ಬರಮಾಡುವಿಯೋ? ಸಪ್ತರ್ಷಿಗಳನ್ನು ಪರಿವಾರದೊಡನೆ ನಡಿಸುವಿಯಾ?
Kannada Bible (KNCL) BSI 2016
ಆಯಾಯ ಕಾಲಕ್ಕೆ ನಕ್ಷತ್ರರಾಶಿಗಳನು ಬರಮಾಡುವೆಯಾ? ಸಪ್ತರ್ಷಿತಾರೆಗಳನು ಪರಿವಾರದೊಡನೆ ನಡೆಸುವೆಯಾ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ನಕ್ಷತ್ರರಾಶಿಗಳನ್ನು ಅವುಗಳ ಕಾಲದಲ್ಲಿ ಹೊರಗೆ ಬರಮಾಡುವೆಯಾ? ಸಪ್ತರ್ಷಿ ತಾರೆಗಳನ್ನು ಅವುಗಳ ಪರಿವಾರ ಸಹಿತವಾಗಿ ನೀನು ನಡೆಸುವೆಯಾ?