Job 39:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಬೇಸಾಯಕ್ಕೆ ಕಾಡುಕೋಣದ ಶಕ್ತಿಯನ್ನು ಅವಲಂಭಿಸಿಕೊಳ್ಳಬಲ್ಲೆಯಾ? ಪ್ರಯಾಸದ ಕೆಲಸವನ್ನು ಅದು ಮಾಡಬೇಕೆಂದು ಅಪೇಕ್ಷಿಸುವೆಯಾ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಲ ಹೆಚ್ಚಾಗಿರುವುದರಿಂದ ಅದರಲ್ಲಿ ನಂಬಿಕೆಯಿಟ್ಟು, ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸಿಬಿಡುವೆಯೋ?
Kannada BSI Bible 2016
ಅದರ ಶಕ್ತಿ ಬಹಳವಾಗಿರುವದರಿಂದ ಅದರಲ್ಲಿ ಭರವಸ ಇಡುವಿಯೋ? ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸುವಿಯೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಬಲಹೆಚ್ಚಾಗಿರುವದರಿಂದ ಅದರಲ್ಲಿ ನಂಬಿಕೆಯಿಟ್ಟು ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸಿಬಿಡುವಿಯೋ?
Kannada Bible (KNCL) BSI 2016
ಬಲವಿದೆಯೆಂದು ಅದರಲಿ ನಂಬಿಕೆಯಿಡುವೆಯಾ? ಬಲಿಷ್ಠಕಾರ್ಯಗಳನು ಅದಕ್ಕೆ ಒಪ್ಪಿಸಿಬಿಡುವೆಯಾ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಶಕ್ತಿ ಹೆಚ್ಚಾಗಿರುವುದರಿಂದ ನೀನು ಕೆಲಸಕ್ಕಾಗಿ ಅದನ್ನೇ ನಂಬಿರುವೆಯಾ? ನಿನ್ನ ಭಾರವಾದ ಕೆಲಸವನ್ನು ಅದಕ್ಕೆ ಒಪ್ಪಿಸಿಬಿಡುವೆಯಾ?