Job 39:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆಟ್ಟದ ಮೇಕೆಯೂ ಜಿಂಕೆಯೂ ತಮ್ಮ ಮರಿಗಳನ್ನು ಹೊಟ್ಟೆಯಲ್ಲಿ ಎಷ್ಟು ತಿಂಗಳವರೆಗೆ ಹೊತ್ತುಕೊಂಡಿರುತ್ತವೆ. ಎಂಬುದು ನಿನಗೆ ಗೊತ್ತಿದೆಯೋ? ಅವುಗಳು ಹುಟ್ಟುವುದಕ್ಕೆ ಸರಿಯಾದ ಸಮಯ ಯಾವುದೆಂದು ನಿನಗೆ ಗೊತ್ತಿದೆಯೋ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವು ಗರ್ಭವನ್ನು ಹೊರುವ ತಿಂಗಳುಗಳನ್ನು ಎಣಿಸುತ್ತೀಯೋ? ಅವು ಈಯುವ ಕಾಲವನ್ನು ಗೊತ್ತುಮಾಡುವೆಯೋ?
Kannada BSI Bible 2016
ಅವುಗಳ ಗರ್ಭ ತುಂಬುವ ತಿಂಗಳು ಗಳನ್ನು ಎಣಿಸುತ್ತೀಯೋ? ಅವು ಈಯುವ ಕಾಲವನ್ನು ತಿಳಿಯುತ್ತೀಯೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಅವು ಗಬ್ಬವನ್ನು ಹೊರುವ ತಿಂಗಳುಗಳನ್ನು ಲೆಕ್ಕಿಸಿ ಈಯುವ ಕಾಲವನ್ನು ಗೊತ್ತುಮಾಡುವಿಯೋ?
Kannada Bible (KNCL) BSI 2016
ಎಣಿಸಿರುವೆಯಾ ಅವು ಗರ್ಭಹೊರುವ ತಿಂಗಳನು? ಗೊತ್ತುಹಚ್ಚಿರುವೆಯಾ ಅವು ಈಯುವ ವೇಳೆಯನು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳ ಗರ್ಭ ತುಂಬುವ ತಿಂಗಳುಗಳನ್ನು ಎಣಿಸಿರುವೆಯಾ? ಅವು ಈಯುವ ಕಾಲವನ್ನು ತಿಳಿದಿರುವಿಯೋ?