Job 39:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತುತ್ತೂರಿಯ ಧ್ವನಿಗೆ ಕುದುರೆಯು, “ಆಹಾ!” ಎಂದು ಹೇಳುತ್ತದೆ. ಅದು ದೂರದಿಂದಲೇ ಯುದ್ಧವನ್ನು ಮೂಸಿ ನೋಡಿ ತಿಳಿಯುವುದು. ಸೇನಾಧಿಪತಿಗಳು ಗಟ್ಟಿಯಾಗಿ ಅಪ್ಪಣೆಕೊಡುವುದನ್ನೂ ಯುದ್ಧದ ಎಲ್ಲಾ ಕೂಗಾಟವನ್ನೂ ಅದು ಕೇಳಿಸಿಕೊಳ್ಳುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತುತ್ತೂರಿ ಊದಿದಾಗೆಲ್ಲಾ ಆಹಾ! ಎಂದುಕೊಂಡು ಕಾಳಗ, ಆರ್ಭಟ, ಸೇನಾಪತಿಗಳ ಗರ್ಜನೆ, ಇವುಗಳನ್ನು ದೂರದಲ್ಲಿದ್ದರೂ ಮೂಸಿನೋಡಿ ತಿಳಿಯುವುದು.
Kannada BSI Bible 2016
ತುತೂರಿಗಳ ಮಧ್ಯದಲ್ಲಿ ದೂರದಿಂದ ಕಾಳಗವನ್ನೂ ಅಧಿಪತಿಗಳ ಅಬ್ಬರವನ್ನೂ ಯುದ್ಧದ ಧ್ವನಿಯನ್ನೂ ಮೂಸಿ ನೋಡುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ತುತೂರಿಯೂದಿದಾಗೆಲ್ಲಾ ಆಹಾ ಎಂದುಕೊಂಡು ಕಾಳಗ, ಆರ್ಭಟ, ಸೇನಾಪತಿಗಳ ಗರ್ಜನೆ, ಇವುಗಳನ್ನು ದೂರದಲ್ಲಿದ್ದರೂ ಮೂಸಿನೋಡಿ ತಿಳಿಯುವದು.
Kannada Bible (KNCL) BSI 2016
ರಣಕಹಳೆ ಮೊಳಗಿದಾಗಲೆ ಕೆನೆಯುತ್ತದೆ ಕಾಳಗ, ಆರ್ಭಟ, ದಳಪತಿಗಳ ಗರ್ಜನೆ ಇವುಗಳನ್ನೆಲ್ಲಾ ದೂರದಿಂದಲೆ ಮೂಸುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಣಕಹಳೆ ಮೊಳಗಿದಾಗ ಕುದುರೆ ಕೆನೆಯುತ್ತದೆ. ಅದು ಅಧಿಪತಿಗಳ ಗರ್ಜನೆಯನ್ನೂ ಕಾಳಗದ ಆರ್ಭಟವನ್ನೂ ದೂರದಿಂದಲೇ ಮೂಸಿ ನೋಡಿ ತಿಳಿಯುತ್ತದೆ.