Job 4:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದೇನೆಂದರೆ: ‘ದೇವರಿಗಿಂತಲೂ ನೀತಿವಂತನಾದ ಮನುಷ್ಯನಿರುವನೇ? ಮನುಷ್ಯನು ತನ್ನ ಸೃಷ್ಟಿಕರ್ತನಿಗಿಂತಲೂ ಶುದ್ಧನಾಗಿರುವನೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇನೆಂದರೆ, “ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾದಾನೇ? ಮಾನವನು ಸೃಷ್ಟಿಕರ್ತನ ಸನ್ನಿಧಿಯಲ್ಲಿ ಪರಿಶುದ್ಧನಾಗಿರಬಹುದೇ?
Kannada BSI Bible 2016
ದೇವರಿಗಿಂತ ಮನುಷ್ಯನು ಹೆಚ್ಚು ನೀತಿವಂತನೋ? ಪುರುಷನು ತನ್ನನ್ನು ಉಂಟು ಮಾಡಿ ದಾತನಿಗಿಂತಲೂ ಹೆಚ್ಚು ನಿರ್ಮಲನೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇನಂದರೆ - ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾದಾನೇ? ಮಾನವನು ಸೃಷ್ಟಿಕರ್ತನ ಸನ್ನಿಧಿಯಲ್ಲಿ ಪರಿಶುದ್ಧನಾಗಿರಬಹುದೇ?
Kannada Bible (KNCL) BSI 2016
“ದೇವರ ದೃಷ್ಟಿಯಲ್ಲಿ ಸತ್ಯವಂತನಾಗಿರಲು ಮಾನವನಿಗೆ ಸಾಧ್ಯವೆ? ಸೃಷ್ಟಿಕರ್ತನ ಸನ್ನಿಧಿಯಲ್ಲಿ ಪರಿಶುದ್ಧನಾಗಿರಲು ಅವನಿಂದ ಸಾಧ್ಯವೆ?”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಮನುಷ್ಯನು ದೇವರಿಗಿಂತ ಹೆಚ್ಚು ನೀತಿವಂತನಾಗಿರಲು ಸಾಧ್ಯವೇ? ಮಾನವನು ಸೃಷ್ಟಿಕರ್ತ ದೇವರಿಗಿಂತಲೂ ಶುದ್ಧನಾಗಿರಲು ಸಾಧ್ಯವೇ?