Job 4:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗಿರಲು ದೇವರು ಮನುಷ್ಯರಲ್ಲಿ ಎಷ್ಟೋ ತಪ್ಪುಗಳನ್ನು ಕಂಡುಹಿಡಿಯುವನು; ಮನುಷ್ಯರು ಮಣ್ಣಿನ ಮನೆಗಳಲ್ಲಿ ವಾಸಿಸುತ್ತಾರೆ. ಈ ಮಣ್ಣಿನ ಮನೆಗಳ ಅಸ್ತಿವಾರಗಳು ಧೂಳಿನಲ್ಲಿವೆ. ಅವರು ಹುಳಕ್ಕಿಂತಲೂ ಸುಲಭವಾಗಿ ಸಾವಿಗೀಡಾಗುವರು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಧೂಳಿನಲ್ಲಿರುವ ಅಸ್ತಿವಾರದ ಮೇಲೆ, ಮಣ್ಣಿನಿಂದಾದ ಶರೀರಗಳೆಂಬ ಮನೆಗಳೊಳಗೆ ವಾಸಿಸುವವರಲ್ಲಿ ಇನ್ನೆಷ್ಟೋ ಹೆಚ್ಚಾಗಿ ತಪ್ಪು ಕಂಡುಹಿಡಿಯಬಹುದು. ಅವರು ದೀಪದ ಹುಳದಂತೆ ಅಳಿದು ಹೋಗುತ್ತಾರೆ.
Kannada BSI Bible 2016
ಧೂಳಿನಲ್ಲಿ ಅಸ್ತಿವಾರ ಇರುವ ಮಣ್ಣಿನ ಮನೆಗಳ ನಿವಾಸಿಗಳು ಎಷ್ಟು ಕಡಿಮೆ? ನುಸಿಯ ಮುಂದೆ ಅವರು ಜಜ್ಜಲ್ಪಡುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೂಳಿನಲ್ಲಿರುವ ಅಸ್ತಿವಾರದ ಮೇಲೆ ಮಣ್ಣಿನಿಂದಾದ [ಶರೀರಗಳೆಂಬ] ಮನೆಗಳೊಳಗೆ ವಾಸಿಸುವವರಲ್ಲಿ ಇನ್ನೆಷ್ಟೋ ಹೆಚ್ಚಾಗಿ ತಪ್ಪುಕಂಡುಹಿಡಿಯಬೇಕಲ್ಲವೇ. ಅವರು ದೀಪದ ಹುಳದಂತೆ ಅಳಿದು ಹೋಗುತ್ತಾರೆ.
Kannada Bible (KNCL) BSI 2016
ಇಂತಿರಲು ದೂಳಿನಲ್ಲಿ ತಳವೂರಿ, ಮಣ್ಣಿನೊಡಲ ಹೊಕ್ಕು ಬಾಳಿ ಹುಳುವಿನಷ್ಟು ಸುಲಭವಾಗಿ ಅಳಿದುಹೋಗುವವರಲ್ಲಿ ಮತ್ತೆಷ್ಟು ತಪ್ಪೆಣಿಸಲಾರನಾತ ಅಂಥ ನರಮಾನವರಲ್ಲಿ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಧೂಳಿನಲ್ಲಿರುವ ಅಸ್ತಿವಾರದ ಮೇಲೆ ಮಣ್ಣಿನ ಮನೆಗಳ ನಿವಾಸಿಗಳು, ನುಸಿಗಿಂತಲೂ ಹೆಚ್ಚಾಗಿ ಜಜ್ಜಿಹೋದವರು, ಇನ್ನೂ ಹೆಚ್ಚಾಗಿ ದಂಡನೆಗೆ ಒಳಪಡುವರಲ್ಲವೇ?