Job 4:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗಲಾದರೋ ನಿನಗೆ ಕೇಡು ಬಂದಿದೆ; ಆದ್ದರಿಂದ ನೀನು ನಿರಾಶನಾಗಿರುವೆ. ಕೇಡು ನಿನಗೆ ಬಡಿದಿರುವುದರಿಂದ ಭ್ರಮೆಗೊಂಡಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗಲಾದರೋ ನಿನಗೆ ಶ್ರಮೆ ಬಂತು, ಆದುದರಿಂದ ನೀನು ಬೇಸರಗೊಂಡಿರುವಿ. ಅದು ನಿನ್ನನ್ನೇ ತಗಲಿರುವ ಕಾರಣ ನಿನಗೆ ಭ್ರಮೆಯುಂಟಾಗಿದೆ.
Kannada BSI Bible 2016
ಈಗ ಅದು ನಿನ್ನ ಮೇಲೆ ಬಂದದ್ದರಿಂದ ನೀನು ದಣಿಯುತ್ತೀ; ನಿನ್ನನ್ನೂ ಅದು ಮುಟ್ಟಿದ್ದರಿಂದ ಕಳವಳಪಡುತ್ತೀ;
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗಲಾದರೋ ನಿನಗೇ [ಶ್ರಮೆ] ಬಂತು. ಅದರಿಂದ ನೀನು ಬೇಸರಗೊಂಡಿರುವಿ, ಅದು ನಿನ್ನನ್ನೇ ತಗಲಿರುವ ಕಾರಣ ನಿನಗೆ ಭ್ರಮೆಯುಂಟಾಗಿದೆ.
Kannada Bible (KNCL) BSI 2016
ಈಗಲಾದರೂ ಆ ದುರಿತಗಳಿಂದ ನೀನೇ ಧೃತಿಗೆಟ್ಟಿರುವೆ ಅವು ನಿನಗೆ ತಗಲಿ ನೀನೇ ತಲ್ಲಣಗೊಂಡಿರುವೆ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ಆಪತ್ತು ನಿನ್ನ ಮೇಲೆ ಬಂದದ್ದರಿಂದ ನೀನು ದಣಿಯುತ್ತಿರುವೆ; ನಿನಗೂ ಕಡುಕಷ್ಟ ತಟ್ಟಿದ್ದರಿಂದ ಕಳವಳಪಡುತ್ತಿರುವೆ.