Job 40:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಗರ್ವಿಷ್ಠರ ಕಡೆಗೆ ನೋಡಿ ಅವರನ್ನು ದೀನರನ್ನಾಗಿ ಮಾಡು. ದುಷ್ಟರನ್ನು ಅವರು ನಿಂತಿರುವಲ್ಲಿಯೇ ಜಜ್ಜಿಹಾಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಕುಗ್ಗಿಸಿ, ದುಷ್ಟರನ್ನು ತಟ್ಟನೆ ಕೆಡವಿಬಿಡು.
Kannada BSI Bible 2016
ಗರ್ವಿಷ್ಟರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರ ಸ್ಥಳದಲ್ಲಿ ತುಳಿದುಬಿಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಕುಗ್ಗಿಸಿ ದುಷ್ಟರನ್ನು ತಟ್ಟನೆ ಕೆಡವಿಬಿಡು.
Kannada Bible (KNCL) BSI 2016
ಹೌದು, ಕಣ್ಣಿಟ್ಟು ಗರ್ವಿಷ್ಠರೆಲ್ಲರನು ತಗ್ಗಿಸು ದುಷ್ಟರನು ನಿಂತಲ್ಲೇ ತುಳಿದುಬಿಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೌದು, ಗರ್ವಿಷ್ಠರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರು ನಿಂತಿರುವ ಸ್ಥಳದಲ್ಲಿಯೇ ಕೆಡವಿಬಿಡು.