Job 40:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೋಬನೇ, ನನ್ನ ನೀತಿಯನ್ನು ಖಂಡಿಸುವಿಯಾ? ನಿನ್ನನ್ನು ನಿರಪರಾಧಿಯೆಂದು ನಿರೂಪಿಸಲು ನನ್ನನ್ನು ದೋಷಿಯೆಂದು ಪರಿಗಣಿಸುವೆಯಾ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ನೀತಿಯನ್ನು ಖಂಡಿಸಿಬಿಡುವಿಯಾ? ನಿನ್ನ ನ್ಯಾಯವನ್ನು ಸ್ಥಾಪಿಸಿಕೊಳ್ಳಲಿಕ್ಕೆ ನನ್ನನ್ನು ಕೆಟ್ಟವನೆಂದು ನಿರ್ಣಯಿಸುವೆಯೋ?
Kannada BSI Bible 2016
ನೀನು ನನ್ನ ನ್ಯಾಯತೀರ್ವಿಕೆಯನ್ನು ತೆಗೆದುಹಾಕುವಿಯೋ? ನೀನು ನೀತಿವಂತ ನಾಗುವ ಹಾಗೆ ನನ್ನನ್ನು ಖಂಡಿಸುವಿಯೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಏನು! ನನ್ನ ನೀತಿಯನ್ನು ಖಂಡಿಸಿಬಿಡುವಿಯಾ? ನಿನ್ನ ನ್ಯಾಯವನ್ನು ಸ್ಥಾಪಿಸಿಕೊಳ್ಳಲಿಕ್ಕೆ ನನ್ನನ್ನು ಕೆಟ್ಟವನೆಂದು ನಿರ್ಣಯಿಸುವಿಯೋ?
Kannada Bible (KNCL) BSI 2016
ಏನು, ನನ್ನ ನಿರ್ಣಯವನ್ನು ನೀನು ಖಂಡಿಸುತ್ತೀಯೋ? ನೀನು ನಿರ್ದೋಷಿಯೆನಿಸಿಕೊಳ್ಳಲು ನನ್ನನ್ನು ದೋಷಿಯನ್ನಾಗಿಸುತ್ತೀಯೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನ್ನ ನ್ಯಾಯವನ್ನು ನೀನು ಅಪಕೀರ್ತಿ ಮಾಡುತ್ತೀಯೋ? ನೀನು ನಿನ್ನ ನ್ಯಾಯವನ್ನು ಸ್ಥಾಪಿಸಲು ನನ್ನನ್ನು ಅಪರಾಧಿ ಎಂದು ನಿರ್ಣಯಿಸುತ್ತೀಯೋ?