Job 42:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಮೇಲೆ ಯೆಹೋವನು ಯೋಬನನ್ನು ಅಭಿವೃದ್ಧಿಪಡಿಸಿದನು. ಆತನು ಯೋಬನಿಗೆ, ಮೊದಲಿಗಿಂತ ಎರಡರಷ್ಟು ಹೆಚ್ಚಿಗೆ ಆಸ್ತಿಯನ್ನು ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಬಳಿಕ ಯೆಹೋವನು ಅವನ ದುಸ್ಥಿತಿಯನ್ನು ಹೋಗಲಾಡಿಸಿ, ಅವನ ಸೊತ್ತನ್ನು ಮೊದಲಿಗಿಂತ ಎರಡರಷ್ಟಾಗಿ ಹೆಚ್ಚಿಸಿದನು.
Kannada BSI Bible 2016
ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದಾಗ ಕರ್ತನು ಅವನ ಸೆರೆಯನ್ನು ತಿರುಗಿ ಸಿದನು. ಕರ್ತನು ಯೋಬನಿಗೆ ಮೊದಲು ಇದ್ದವು ಗಳಿಗಿಂತ ಎರಡರಷ್ಟು ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಬಳಿಕ ಯೆಹೋವನು ಅವನ ದುಸ್ಥಿತಿಯನ್ನು ಹೋಗಲಾಡಿಸಿ ಅವನ ಸೊತ್ತನ್ನು ಮೊದಲಿಗಿಂತ ಎರಡರಷ್ಟಾಗಿ ಹೆಚ್ಚಿಸಿದನು.
Kannada Bible (KNCL) BSI 2016
ಯೋಬನು ತನ್ನ ಮಿತ್ರರಿಗೋಸ್ಕರ ಪ್ರಾರ್ಥಿಸಿದ ಬಳಿಕ ಸರ್ವೇಶ್ವರಸ್ವಾಮಿ ಅವನ ದುಸ್ಥಿತಿಯನ್ನು ಹೋಗಲಾಡಿಸಿದರು. ಅವನ ಆಸ್ತಿಪಾಸ್ತಿಯನ್ನು ಮೊದಲಿಗಿಂತ ಇಮ್ಮಡಿಯಾಗಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದ ತರುವಾಯ ಯೆಹೋವ ದೇವರು ಅವನ ಸಂಪತ್ತನ್ನು ಪುನಃಸ್ಥಾಪಿಸಿದರು. ಯೆಹೋವ ದೇವರು ಯೋಬನಿಗೆ ಮೊದಲು ಇದ್ದವುಗಳಿಗಿಂತ ಎರಡರಷ್ಟು ಕೊಟ್ಟರು.